Report Abuse
Are you sure you want to report this news ? Please tell us why ?
ರಾಜಕೀಯದಲ್ಲಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಮುಂದಾದ ಚಿತ್ರನಟ ಶಶಿಕುಮಾರ್

29 Nov 2017 3:39 PM | Politics
305
Report
ಅನಿರೀಕ್ಷಿತ ಬೆಳವಣಿಗೆಯಲ್ಲಿ ಶಶಿಕುಮಾರ್ ಅವರು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಬಿಜೆಪಿ ಮುಖಂಡರೊಂದಿಗೆ ಸುದ್ದಿಗೋಷ್ಠಿ ನಡೆಸಿದರು. ಈ ಸಂದರ್ಭದಲ್ಲಿ ಅವರು ಚಿತ್ರದುರ್ಗದಲ್ಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತ ಪಡಿಸಿದ್ದಾರೆ.
ಶಶಿಕುಮಾರ್ ಅವರು ಹಿರಿಯೂರಿನ ಕಾಂಗ್ರೆಸ್ ಶಾಸಕ ಸುಧಾಕರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಶಶಿಕುಮಾರ್ ಅವರು ಈ ಹಿಂದೆ 1999 ರಿಂದ 2004ರವರೆಗೆ ಚಿತ್ರದುರ್ಗ ಲೋಕಸಭಾ ಸದಸ್ಯರಾಗಿದ್ದರು. ಆನಂತರ ಚಿಕ್ಕಬಳ್ಳಾಪುರದಿಂದ ಲೋಕಸಭೆ ಚುನಾವಣೆ ಮತ್ತು ಚಳ್ಳಕೆರೆಯಿಂದ ವಿಧಾನಸಭೆಗೆ ಸ್ಪರ್ಧಿಸಿ ಸೋತಿದ್ದರು.

Edited By
Hema Latha

Comments