ಕುಮಾರಸ್ವಾಮಿಯ ಮುಖ್ಯಮಂತ್ರಿ ಸ್ಥಾನ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ : ಗೌಡರ ಭವಿಷ್ಯ

ಯಾರು ಎಷ್ಟೇ ಹೊಟ್ಟೆಕಿಚ್ಚು ಪಟ್ಟರೂ ಸಹ ಎಚ್.ಡಿ.ಕುಮಾರಸ್ವಾಮಿಯವರು ಮತ್ತೆ ಮುಖ್ಯಮಂತ್ರಿಯಾಗುತ್ತಾರೆ. ಅವರ ಮುಖ್ಯಮಂತ್ರಿ ಸ್ಥಾನ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು.
ಇಡೀ ರಾಜ್ಯದಲ್ಲಿ ಕುಮಾರಣ್ಣ ಕುಮಾರಣ್ಣ ಎಂಬ ಕೂಗು ಎದ್ದಿದೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು ಹೇಳಿದರು. ನಮ್ಮ 'ಟೈಗರ್ ಕ್ಯಾಬ್' ಸೇವೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, 20 ತಿಂಗಳ ಆಡಳಿತಾವಧಿಯಲ್ಲಿ ಮುಖ್ಯಮಂತ್ರಿಯಾಗಿ ಅತ್ಯುತ್ತಮವಾದ ಸೇವೆಯನ್ನು ಜನತೆಗೆ ನೀಡಿದ್ದಾರೆ. ಈ ನಾಡಿನಲ್ಲಿ ನಾವು ಕೊಡುವ ಭಾಗ್ಯವೆಂದರೆ ದುಡಿಯುವ ಕೈಗಳಿಗೆ ಆರ್ಥಿಕ ಶಕ್ತಿ ಕೊಡಬೇಕು. ನಾನು ಮುಖ್ಯಮಂತ್ರಿಯಾಗಿದ್ದಾಗ ಚಾಲಕರಿಗಾಗಿ ಕೆಲವು ಯೋಜನೆಗಳನ್ನು ಜಾರಿಗೆ ತಂದಿದ್ದೆ ಎಂದು ಹೇಳಿದರು.
Comments