ಅನಿತಾ ಕುಮಾರಸ್ವಾಮಿ ಮತ್ತು ಪ್ರಜ್ವಲ್ ರೇವಣ್ಣ ಚುನಾವಣೆಯ ಅಖಾಡಕ್ಕೆ ದುಮುಕುವುದು ನಿಶ್ಚಿತ

ದೇವೇಗೌಡರ ಕುಟುಂಬದಿಂದ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಮತ್ತು ರೇವಣ್ಣ ಮಾತ್ರ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಇದೀಗ ಅನಿತಾ ಕುಮಾರಸ್ವಾಮಿ ಹಾಗೂ ಪ್ರಜ್ವಲ್ ರೇವಣ್ಣ ಕೂಡ ಚುನಾವಣಾ ಅಖಾಡಕ್ಕೆ ದುಮುಕುವುದು ನಿಶ್ಚಿತವಾಗಿದೆ.
ಅನಿತಾ ಕುಮಾರಸ್ವಾಮಿಯವರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದರೆ ಪ್ರಜ್ವಲ್ ರೇವಣ್ಣ ಬೇಲೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಪಕ್ಷ ಗ್ರೀನ್ ಸಿಗ್ನಲ್ ನೀಡಿದೆ.ಇದುವರೆಗೂ ಪ್ರಜ್ವಲ್ ರೇವಣ್ಣ ಆರ್‍ಆರ್ ನಗರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು.ಇದೀಗ ಅವರು ಬೇಲೂರಿನಿಂದ ಸ್ಪರ್ಧಿಸುವ ಸಾಧ್ಯತೆ ಹೆಚ್ಚಾಗಿರುವುದರಿಂದ ಮುನಿರತ್ನ ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತ ಎಂದು ಮೂಲಗಳು ದೃಢಪಡಿಸಿವೆ.
Comments