ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳ ಭವಿಷ್ಯ ನುಡಿದ ದೇವೇಗೌಡ್ರು

ಕಾಂಗ್ರೆಸ್ ಜೊತೆ ಜೆಡಿಎಸ್ ಹೊಂದಾಣಿಕೆ ನಡೆಸುತ್ತಿದೆ ಅಂತ ಕೆಲವರಿಗೆ ಅನುಮಾನ ಕಾಡ್ತಿದೆ. ಆದ್ರೆ ಕಾಂಗ್ರೆಸ್‍ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲ್ಲ ಅಂತಾ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜೆಡಿಎಸ್ ಪಕ್ಷದ ನೂತನ ಕಚೇರಿ ಹಾಗು ಸಮಾವೇಶದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೋಲಾರ ಹಾಗೂ ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳಲ್ಲಿ 9 ಜನ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಭವಿಷ್ಯ ನುಡಿದ್ರು.
ಪಕ್ಷ ಸಂಘಟನೆ ಮತ್ತು ಮುಂದಿನ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಜವಾಬ್ದಾರಿಯನ್ನು ಪ್ರಜ್ವಲ್ ರೇವಣ್ಣಗೆ ನೀಡಿದ್ದೇವೆ. ಚನ್ನಪಟ್ಟಣದಿಂದ ಸ್ಪರ್ಧಿಸುವಂತೆ ಅನಿತಾ ಕುಮಾರಸ್ವಾಮಿಗೆ ಎಲ್ಲರೂ ಒತ್ತಡ ಹೇರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ತೀವಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು.ಅನಿತಾ ಕುಮಾರಸ್ವಾಮಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರೊಂದಿಗೆ ವೇದಿಕೆ ಹಂಚಿಕೊಂಡಿರುವುದರಿಂದ ಬೇರೆ ಬೇರೆ ಆಪಾದನೆಗಳು ಕೇಳಿಬಂದಿವೆ. ಜೊತೆಗೆ ಬೆಂಗಳೂರಿನ ಕೆಂಪೇಗೌಡ ಜಯಂತಿಯಲ್ಲಿ ಶಿವಕುಮಾರ್ ನನ್ನ ಕಾಲಿಗೆರಗಿದ್ದಕ್ಕೂ ಕೂಡ ಹೊಂದಾಣಿಕೆ ರಾಜಕೀಯ ನಡೆಯುತ್ತಿದೆ ಎಂದು ಸಾಕಷ್ಟು ಅನುಮಾನ ಕೆಲವರಿಗೆ ಕಾಡ್ತಿದೆ. ಆದ್ರೆ ಜೆಡಿಎಸ್ ಕಾಂಗ್ರೆಸ್ ನೊಂದಿಗೆ ಯಾವುದೇ ಕಾರಣಕ್ಕೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಅದು ರಾಜ್ಯದ 224 ಕ್ಷೇತ್ರ, ಅದರಲ್ಲೂ ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರ ಕ್ಷೇತ್ರ ಒಳಗೊಂಡಂತೆ ಯಾವುದೇ ಕ್ಷೇತ್ರದಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಅಂತ ಸ್ಪಷ್ಟಪಡಿಸಿದರು.
Comments