ಹಾಸನದಿಂದ ಪ್ರಜ್ವಲ್ ರೇವಣ್ಣ ಕಣಕ್ಕೆ...ಗೌಡರ ಸುಳಿವು

ಮುಂದಿನ ಲೋಕಸಭೆಯಲ್ಲಿ ಹಾಸನದಿಂದ ಪ್ರಜ್ವಲ್ ರೇವಣ್ಣ ಕಣಕ್ಕಿಳಿಸುವ ಬಗ್ಗೆ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಸುಳಿವು ನೀಡಿದ್ದಾರೆ.
ಇಂದು ಹಾಸನದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿರುವ ಅವರು ನನಗೂ 86 ವರ್ಷ ವಯಸ್ಸು ಆಗಿದೆ, ಈ ನಿಟ್ಟಿನಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ, ಬದಲಿಗೆ ನನ್ನ ಮೊಮ್ಮಗ ಪ್ರಜ್ವಲ್ ರೇವಣ್ಣ ಹಾಸನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎಂದು ಹೇಳಿದರು.ಇದೇ ವೇಳೆ ಅವರು ಕುಟುಂಬ ರಾಜಕಾರಣದ ಬಗ್ಗೆ ಕೂಡ ಸ್ಪಷ್ಟಪಡಿಸಿದ್ದು, ಕುಟುಂಬದವರಿಗೆ ರಾಜಕೀಯ ಬಿಟ್ಟು ಕೊಡಬೇಕು ಎನ್ನುವ ಕಾರಣಕ್ಕಾಗಿ ನಾನು ಪ್ರಜ್ವಲ್ ರೇವಣ್ಣ ಅವರಿಗೆ ಹಾಸನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಅವಕಾಶ ಮಾಡಿಕೊಡುತ್ತಿಲ್ಲ, ಬದಲಿಗೆ ಪಕ್ಷ ಸಂಘಟನಗೆ ಒತ್ತು ನೀಡುವ ನಿಟ್ಟಿನಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಅಂತ ಹೇಳಿದರು.
Comments