ಕೈ ಪಕ್ಷಕ್ಕೆ ಸೇರಲು ಹಲವು ನಾಯಕರು ತುದಿಗಾಲಲ್ಲಿದ್ದಾರೆ, ಶೀಘ್ರದಲ್ಲೇ ಪಟ್ಟಿ ಬಿಡುಗಡೆ : ಸಿಎಂ
ನಮ್ಮ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಅನೇಕ ನಾಯಕರು ತುದಿಗಾಲಿನಲ್ಲಿ ನಿಂತಿದ್ದಾರೆ. ಇತರೆ ಪಕ್ಷಗಳ ಯಾವ ಯಾವ ನಾಯಕರು ಪಕ್ಷ ಸೇರಲಿದ್ದಾರೆ ಎಂಬುದನ್ನು ಶೀಘ್ರದಲ್ಲೇ ತಿಳಿಸುವುದಾಗಿ ಪಕ್ಷಾಂತರಿಗಳ ಗೌಪ್ಯತೆ ಕಾಪಾಡಿದರು.
ಟಿ.ಕೆ.ಬಡಾವಣೆಯ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಪಕ್ಷದ ನಾಯಕರು ಮತ್ತು ಮುಖಂಡರು ಕಾಂಗ್ರೆಸ್ಗೆ ಬಂದರೆ ಸ್ವಾಗತವಿದೆ ಎಂದರು. ಬಿಜೆಪಿ ಮತ್ತು ಜೆಡಿಎಸ್ನ ಮತ್ತಷ್ಟು ಪ್ರಮುಖ ನಾಯಕರು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
Comments