ಕಾಂಗ್ರೆಸ್ ಗೆ ಯಾವ ನಾಯಕರು ಸೇರ್ಪಡೆ? ಶೀರ್ಘದಲ್ಲೇ ಹೆಸರು ಬಿಡುಗಡೆ

ಮೈಸೂರು: ಚುನಾವಣೆ ಹತ್ತಿರ ಬರುತ್ತಿದೆ. ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಬರುವ ನಾಯಕರ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಬಿಜೆಪಿ ಮತ್ತು ಆಡಳಿತಾರೂಢ ಕಾಂಗ್ರೆಸ್ ಈ ವಿಷಯದಲ್ಲಿ ಪೈಪೋಟಿ ನಡೆಸುತ್ತಿದೆ.
ಮೈಸೂರು: ಚುನಾವಣೆ ಹತ್ತಿರ ಬರುತ್ತಿದೆ. ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಬರುವ ನಾಯಕರ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಬಿಜೆಪಿ ಮತ್ತು ಆಡಳಿತಾರೂಢ ಕಾಂಗ್ರೆಸ್ ಈ ವಿಷಯದಲ್ಲಿ ಪೈಪೋಟಿ ನಡೆಸುತ್ತಿದೆ. ಬಿಜೆಪಿಯಿಂದ ಕಾಂಗ್ರೆಸ್ ಗೆ ಹಾಗೂ ಕಾಂಗ್ರೆಸ್ ನಿಂದ ಬಿಜೆಪಿಗೆ ನಾಯಕರು ಸೇರ್ಪಡೆಗೊಳ್ಳುತ್ತಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಪಕ್ಷಕ್ಕೆ ಕೆಲ ನಾಯಕರು ಬರಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.
ಮಾಜಿ ಶಾಸಕ ವಿಜಯ್ ಶಂಕರ್ ಕಾಂಗ್ರೆಸ್ ಸೇರುತ್ತಾರೆಂಬ ವದಂತಿಗಳು ಕೇಳಿ ಬರುತ್ತಿರುವ ಬೆನ್ನಲ್ಲೇ , ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ ಎಂದಿದ್ದಾರೆ.ಹಲವು ನಾಯಕರು ಕಾಂಗ್ರೆಸ್ ಗೆ ಸೇರ್ಪಡೆಗೊಳ್ತಾರೆ. ಆದರೆ ಯಾರೆಲ್ಲಾ ಬರುತ್ತಾರೆಂದು ಶೀಘ್ರದಲ್ಲೇ ಹೆಸರು ಹೇಳುತ್ತೇನೆ ಎಂದಿದ್ದಾರೆ.
Comments