ನಮ್ಮ ಕಡೆಯಿಂದ ಯಾವ ಯಾತ್ರೆಯೂ ಇಲ್ಲ, ಸಿಎಂ ಸಿದ್ದರಾಮಯ್ಯ

ಮೈಸೂರು: ಎನ್.ಆರ್ ಪುರದ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿರುವ ಸಿಎಂ ಪಕ್ಷದ ಸಾಧವಾ ಸಮಾವೇಶ ಯಾತ್ರೆ ಈ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಅಸಮಾಧಾನಗೊಂಡಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ್ದಾರೆ.
ಮೈಸೂರು: ಎನ್.ಆರ್ ಪುರದ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿರುವ ಸಿಎಂ ಪಕ್ಷದ ಸಾಧವಾ ಸಮಾವೇಶ ಯಾತ್ರೆ ಈ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಅಸಮಾಧಾನಗೊಂಡಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು , ನಾವು ಎಲ್ಲಾ ಕ್ಷೇತ್ರಗಳ ಪ್ರವಾಸ ಹಮ್ಮಿಕೊಂಡು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ನೆರವೇರಿಸುತ್ತಿದ್ದೇವೆ ಸಮಯಾವಕಾಶ ಕಡಿಮೆ ಇರುವ ಕಾರಣ ಈ ಕಾರ್ಯಕ್ಕೆ ವೇಗ ನೀಡಲಾಗಿದ್ದು,ಇದು ಸರ್ಕಾರಿ ಕಾರ್ಯಕ್ರಮ ಎಂದರು.
ಕಾಂಗ್ರೆಸ್ ನಿಂದ ರಾಜ್ಯದಲ್ಲಿ ಯಾವುದೇ ಯಾತ್ರೆ ಇಲ್ಲ. ಈ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ , ಎಲ್ಲಾ ಕಡೆ ಪಕ್ಷದ ಕಾರ್ಯಕರ್ತರ ಸಭೆ ಆರಂಭವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.
ಸಂವಿಧಾನ ಬದಲಾವಣೆ ಕುರಿತು ಎದ್ದಿರುವ ವಿವಾದಕ್ಕೆ ಸಂಬಂಧಪಟ್ಟಂತೆ ಮಾತನಾಡಿರುವ ಅವರು, ಯಾವುದೇ ಕಾರಣಕ್ಕೂ ಸಂವಿಧಾನ ಬದಲಾವಣೆ ಅಸಾಧ್ಯ ಎಂದರು. ಪೇಜಾವರ ಶ್ರೀ ಅಲ್ಲ ಯಾವ ಸ್ವಾಮೀಜಿ ಬಗ್ಗೆಯೂ ನಾನು ಮಾತನಾಡಲ್ಲ. ಆದರೆ ಸಮಾಜದ ಶಾಂತಿಗೆ ಭಂಗ ತರುವ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು.
Comments