'ಕಲ್ಲಿದ್ದಲು ಸಮಸ್ಯೆಗೆ ಕೇಂದ್ರ ಅಡ್ಡಿ'

ಬೆಂಗಳೂರು: ರಾಜ್ಯದಲ್ಲಿ ಕಲ್ಲಿದ್ದಲು ಸಮಸ್ಯೆ ಇದೆ, ಇದಕ್ಕೆ ಕೇಂದ್ರ ಸರ್ಕಾರ ಅಡ್ಡಿಪಡಿಸುತ್ತಿದೆ ಎಂದು ಇಂಧನ ಸಚಿವ ಡಿ.ಕೆ ಶಿವಕುಮಾರ್ ಅಭಿಪ್ರಾಯ ಪಟ್ಟರು.
ಬೆಂಗಳೂರು: ರಾಜ್ಯದಲ್ಲಿ ಕಲ್ಲಿದ್ದಲು ಸಮಸ್ಯೆ ಇದೆ, ಇದಕ್ಕೆ ಕೇಂದ್ರ ಸರ್ಕಾರ ಅಡ್ಡಿಪಡಿಸುತ್ತಿದೆ ಎಂದು ಇಂಧನ ಸಚಿವ ಡಿ.ಕೆ ಶಿವಕುಮಾರ್ ಅಭಿಪ್ರಾಯ ಪಟ್ಟರು. ನಗರದಲ್ಲಿ ಸುದ್ದಿಗಾರರ ಜತೆಗೆ ಮಾತನಾಡುತ್ತಿದ್ದ ಅವರು ಕರ್ನಾಟಕ ಸರ್ಕಾರ ಮಹಾರಾಷ್ಟ್ರದಿಂದ ಕಲ್ಲಿದ್ದಲು ಸಂಗ್ರಹಿಸಲು ಸಾಧ್ಯವಾಗುತ್ತಿಲ್ಲ ಎಂದು ಆರೋಪ ಮಾಡಿದರು.
ಈ ಬಾರಿ ಯಾವುದೇ ಲೋಡ ಶೆಡ್ಡಿಂಗ್ ಮಾಡಲ್ಲ, ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಈ ವಿಷಯವಾಗಿ ಕೇಂದ್ರ ರಾಜಕೀಯ ಮಾಡುತ್ತಿದ್ದು, ಇದು ಬಹಳ ಆಘಾತಕಾರಿಯಾಗಿದೆ ಎಂದು ಇಂಧನ ಸಚಿವರು ಹೇಳಿದರು. ಡಿಸೆಂಬರ್ 6 ಮತ್ತು 7ರಂದು ದೆಹಲಿಯಲ್ಲಿ ನಡೆಯಲಿರುವ ಎಲ್ಲಾ ರಾಜ್ಯಗಳ ಇಂಧನ ಸಚಿವರ ಸಭೆಯಲ್ಲಿ ಪ್ರಸ್ತಾಪಿಸುವುದಾಗಿ ತಿಳಿಸಿದರು.
Comments