ಶೀಘ್ರದಲ್ಲೇ ಪ್ರಕಟವಾಗಲಿದೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ

ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಗೂ ಮೊದಲೇ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಚುನಾವಣಾ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾ ವೀಕ್ಷಕರ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.13ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ದಲಿತ ಅಭಿಮಾನಿಗಳ ಸಮಾವೇಶ ನಡೆಸಲಾಗುತ್ತಿದ್ದು, ಇದಲ್ಲದೆ ಬಿಜಾಪುರದಲ್ಲಿ ಬೃಹತ್ ರೈತರ ಸಮಾವೇಶ, ಡಿ.10ರಂದು ತುಮಕೂರಿನಲ್ಲಿ ಅಲ್ಪಸಂಖ್ಯಾತರ ಸಮಾವೇಶ ನಂತರ ರಾಯಚೂರಿನಲ್ಲಿ ಅಲ್ಪಸಂಖ್ಯಾತರ ಸಮಾವೇಶ ನಡೆಸಲಾಗುವುದು ಎಂದರು. ನಾಳೆ, ನಾಡಿದ್ದು ಎರಡು ದಿನಗಳ ಕಾಲ ಹೆಚ್ಚಿನ ಪೈಪೋಟಿ ಇರುವ ರಾಜರಾಜೇಶ್ವರಿನಗರ ಹಾಗೂ ಇನ್ನಿತರೆಡೆ ಕ್ಷೇತ್ರವಾರು ಕಾರ್ಯಕರ್ತರ ಹಾಗೂ ಮುಖಂಡರ ಸಭೆ ನಡೆಸಿ ಒಮ್ಮತಕ್ಕೆ ಬಂದು ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದೆ. ಜತೆಗೆ ಮಂಡ್ಯ ಹಾಗೂ ಕೆಆರ್ ಪೇಟೆ ಕ್ಷೇತ್ರಗಳಲ್ಲೂ ಹೆಚ್ಚಿನ ಆಕಾಂಕ್ಷಿಗಳಿದ್ದು, ಅವರಲ್ಲೂ ಒಮ್ಮತ ಮೂಡಿಸುವ ಪ್ರಯತ್ನ ನಡೆಸಲಾಗುವುದು. ಈ ನಿಟ್ಟಿನಲ್ಲಿ ಡಿ.7ರಂದು ಅಲ್ಲಿ ಸಭೆ ನಡೆಸಲಾಗುತ್ತಿದೆ. ಅದಕ್ಕೂ ಮುನ್ನ ಡಿ.6ರಂದು ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದೇವೆ ಎಂದು ಮಾಹಿತಿ ನೀಡಿದರು.
Comments