ಸಾಮರ್ಥ್ಯ ಗುರುತಿಸಿ ವರಿಷ್ಠರು ಜವಾಬ್ದಾರಿ ನೀಡಿದ್ದಾರೆ : ಪ್ರಜ್ವಲ್ ರೇವಣ್ಣ

04 Dec 2017 1:40 PM | Politics
387 Report

ಪಕ್ಷ ಸಂಘಟಿಸುವಲ್ಲಿ ತಮ್ಮ ಸಾಮರ್ಥ್ಯ ಗುರುತಿಸಿ ಜೆಡಿಎಸ್ ವರಿಷ್ಠರು ಜವಾಬ್ದಾರಿ ನೀಡಿದ್ದಾರೆ ಎಂದು ಸಿಂಧನೂರಿನಲ್ಲಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

ತಾವು ಚುನಾವಣೆಗೆ ಸ್ಪರ್ಧಿಸುವಲ್ಲಿ ಆಸಕ್ತಿ ಹೊಂದಿದ್ದು, ಟಿಕೆಟ್ ನೀಡಿಕೆ ಬಗ್ಗೆ ಪಕ್ಷದ ಮುಖಂಡ ಬಂಡೆಪ್ಪ ಕಾಶೆಂಪುರ ನೇತೃತ್ವದ ಸಮಿತಿ ಅಂತಿಮಗೊಳಿಸಲಿದೆ ಎಂದು ತಿಳಿಸಿದರು. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಸದ್ಯಕ್ಕೆ ಆಲೋಚನೆಯಿಲ್ಲ. ಪ್ರಸ್ತುತ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಲಾಗುವುದು ಎಂದು ಪ್ರಜ್ವಲ್‌ ಹೇಳಿದರು. 

Edited By

Shruthi G

Reported By

Shruthi G

Comments