ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ವಿರುದ್ದ ಗುಡುಗಿದ ಎಚ್ ಡಿಕೆ

ವಿದ್ಯುತ್ ಖರೀದಿ ಹಗರಣದ ಬಗ್ಗೆ ಸದನ ಸಮಿತಿಯ ವರದಿ: "ಇವರ ಬಂಡವಾಳ ನನಗೆ ಗೊತ್ತಿದೆ, ನಾಲ್ಕು ವರ್ಷಗಳಲ್ಲಿ ಏನೇನು ಮಾಡಿದ್ದಾರೆ? ಎಂದು ಗೊತ್ತಿದೆ. ವಿದ್ಯುತ್ ಖರೀದಿ ಹಗರಣದ ಬಗ್ಗೆ ಸದನ ಸಮಿತಿಯ ವರದಿಯ ಬಗ್ಗೆ ಚರ್ಚೆ ನಡೆಯಲಿ ಇವರ ಬಂಡವಾಳ ಬಿಚ್ಚಿಡುತ್ತೇನೆ. ಇವರ ಅವಧಿಯಲ್ಲಿ ನಾಲ್ಕು ವರ್ಷ ಏನೇನು ಮಾಡಿದ್ದಾರೆ ಅಂತ ಗೊತ್ತಿದೆ. ಈ ವರದಿಗೆ ನಾಚಿಕೆಯಾಗಬೇಕು" ಎಂದು ಎಚ್ ಡಿಕೆ , ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಅವರ ವಿರುದ್ದ ಗುಡುಗಿದರು.
'ವರದಿಗೆ ನಾನು ಸಹಿ ಹಾಕಿಲ್ಲ, ಸಿದ್ದರಾಮಯ್ಯ ಸರ್ಕಾರ ದಾಖಲೆಗಳನ್ನು ನಾಶ ಮಾಡುವುದರಲ್ಲಿ ಎಕ್ಸ್‌ಪರ್ಟ್' ಎಂದು ಎಚ್ ಡಿಕೆ, ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಅವರ ವಿರುದ್ದ ವಾಗ್ದಾಳಿ ನಡೆಸಿದರು. 'ಮಾತೆತ್ತಿದರೆ ಬಿಜೆಪಿ ಕೋಮುವಾದಿ ಎನ್ನುವ ಸಿದ್ದರಾಮಯ್ಯನವರು, ಬಿಜೆಪಿ ಜೊತೆ ಕೈಜೋಡಿಸಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸಿದ್ದು ನನಗೆ ಗೊತ್ತಿಲ್ಲದ ವಿಚಾರವೇನೂ ಅಲ್ಲ. ಸಿದ್ದರಾಮಯ್ಯ ಮತ್ತು ಬಿಜೆಪಿ ಮುಖಂಡರ ಜೊತೆಗಿರುವ ಮಧ್ಯವರ್ತಿಗಳೇ, ಮುಖ್ಯಮಂತ್ರಿಗಳ ಈ ಬಂಡವಾಳವನ್ನು ಜನತೆಯ ಮುಂದೆ ಬಿಚ್ಚಿಡಲಿದ್ದಾರೆ. ಆಪರೇಷನ್ ಕಮಲಕ್ಕೆ ಸಾಥ್ ನೀಡಿದ್ದೇ ಸಿದ್ದರಾಮಯ್ಯ' ಎಂದು ಎಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. 'ದಿನದಿಂದ ದಿನಕ್ಕೆ ಕಾಂಗ್ರೆಸ್ ಹೈಕಮಾಂಡ್ ದುರ್ಬಲಗೊಳ್ಳುತ್ತಿದೆ. ಇದರ ಲಾಭವನ್ನು ಪಡೆದುಕೊಳ್ಳುತ್ತಿರುವ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಮುಂತಾದವರನ್ನು ಮೂಲೆಗುಂಪು ಮಾಡುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿಯ ಪ್ರಭಾವವನ್ನು ತಡೆದ ಕ್ರೆಡಿಟ್ ನಮ್ಮ ಪಕ್ಷಕ್ಕೆ ಸಲ್ಲಬೇಕು' ಎಂದು ಎಚ್ ಡಿಕೆ ಗುಡುಗಿದರು
Comments