ರೈತರ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ದೊರಕಿಸಿಕೊಡುವುದಾಗಿ ಎಚ್ ಡಿ ಕೆ ವಿಶ್ವಾಸ

ರಾಜ್ಯ ಜನರ ಆಶೀರ್ವಾದದಿಂದ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ನಿಚ್ಚಳ ಬಹುಮತದೊಂದಿಗೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಅಧಿಕಾರಕ್ಕೆ ಬಂದ 24 ಗಂಟೆಗಳೊಳಗೆ ರೈತರ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ದೊರಕಿಸಿಕೊಡುತ್ತೇನೆ ಎಂದು ಎಚ್.ಡಿ.ಕುಮಾರಸ್ವಾಮಿಯವರು ವಿಶ್ವಾಸ ವ್ಯಕ್ತಪಡಿಸಿದರು.
'ರೈತರೇ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ನಾಲ್ಕು ಮುಕ್ಕಾಲು ವರ್ಷವೇ ಕಾದಿದ್ದೀರಿ. ಇನ್ನು ಮೂರೂವರೆ ತಿಂಗಳು ಸಮಾಧಾನದಿಂದಿರಿ. ನಿಮ್ಮೆಲ್ಲಾ ಸಮಸ್ಯೆಗಳಿಗೂ ನಾನು ಪರಿಹಾರ ದೊರಕಿಸಿಕೊಡುವೆ' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು. ನಿತ್ಯ ರಾಜ್ಯದಲ್ಲಿ ರೈತರ ಆತ್ಮಹತ್ಯೆಗಳು ನಡೆಯುತ್ತಿವೆ. ನಿನ್ನೆ ಮೂರು ಜನ ರೈತರು ಸಾವಿಗೀಡಾಗಿದ್ದಾರೆ, ಇಂದು ನಾಲ್ಕು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ಆತ್ಮಸ್ಥೈರ್ಯದಿಂದ ಬದುಕುವ ಆಲೋಚನೆ ಮಾಡಿ. ನಿರಂತರ ಆತ್ಮಹತ್ಯೆಗೆ ಸರ್ಕಾರ ಸ್ಪಂದಿಸುತ್ತಿಲ್ಲ. ರಾಷ್ಟ್ರೀಯ ಪಕ್ಷಗಳಿಂದ ರೈತರ ಹಿತ ಅಸಾಧ್ಯ' ಎಂದು ಹೇಳಿದರು.
Comments