ಎಚ್.ಡಿ.ಕೋಟೆ ಕ್ಷೇತ್ರದ ಮಾಜಿ ಶಾಸಕನ ಚಿತ್ತ ಜೆಡಿಎಸ್ ನತ್ತ
ಬಿಜೆಪಿ ತೊರೆದಿದ್ದ ಎಚ್.ಡಿ.ಕೋಟೆ ಕ್ಷೇತ್ರದ ಮಾಜಿ ಶಾಸಕ ಚಿಕ್ಕಣ್ಣ ಅವರು ಜೆಡಿಎಸ್ ಸೇರುವುದು ಬಹುತೇಕ ಖಚಿತವಾಗಿದೆ.
ಈಚೆಗೆ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ನಡೆಸಿದ ಮಾತುಕತೆ ಫಲಪ್ರದವಾಗಿದ್ದು, ಟಿಕೆಟ್ ಭರವಸೆ ಸಿಕ್ಕಿದೆ ಎನ್ನಲಾಗಿದೆ. ಒಂದು ವಾರದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿಗೆ ರಾಜೀನಾಮೆ ನೀಡಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪರ್ಕದಲ್ಲಿ ಇದ್ದರು. ಆದರೆ, ಟಿಕೆಟ್ ನೀಡುವ ಕುರಿತು ಯಾವುದೇ ಭರವಸೆ ನೀಡಿರಲಿಲ್ಲ. ಕಾಂಗ್ರೆಸ್‌ನ ವಿಳಂಬ ಧೋರಣೆಯಿಂದ ಬೇಸತ್ತ ಚಿಕ್ಕಣ್ಣ ಜೆಡಿಎಸ್‌ನತ್ತ ಮುಖ ಮಾಡಿದ್ದಾರೆ ಎನ್ನಲಾಗಿದೆ.
Comments