ಡಾ.ಬಿ.ಆರ್.ಅಂಬೇಡ್ಕರ್ ರವರಿಗೆ ಪ್ರಧಾನಿ ಸೇರಿದಂತೆ ಗಣ್ಯರಿಂದ ಶ್ರದ್ಧಾಂಜಲಿ

ನವದೆಹಲಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 61ನೇ ಮಹಾ ಪರಿನಿರ್ವಾಣ ದಿನದ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ದಲಿತರ ಉದ್ಧಾರಕ್ಕಾಗಿ ಅಮೂಲ್ಯ ಕೊಡುಗೆ ನೀಡಿದ ಅಂಬೇಡ್ಕರ್ ಅವರು 1956ರಂದು ಇದೇ ದಿನ ನಿಧನರಾದರು. ಈ ಸಂದರ್ಭದಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ 'ಮಹಾ ಪರಿನಿರ್ವಾಣ ದಿವಸದಂದು ನಾನು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ತಲೆಬಾಗಿ ನಮಿಸುತ್ತೇನೆ' ಎಂದು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಇಂದು ದೇಶಾದ್ಯಂತ ಮಹಾ ಪರಿನಿರ್ವಾಣ ದಿನವನ್ನು ಆಚರಿಸಲಾಗುತ್ತಿದೆ. ಮಹಾರಾಷ್ಟ್ರ ರಾಜಧಾನಿ ಮುಂಬೈನ ಅಂಬೇಡ್ಕರ್ ಸ್ಮಾರಕವಾದ ಚೈತ್ಯಭೂಮಿಯಲ್ಲಿ ನಡೆದ ಮುಖ್ಯ ಕಾರ್ಯಕ್ರಮದಲ್ಲಿ ಸಾವಿರಾರು ಅನುಯಾಯಿಗಳು ಪಾಲ್ಗೊಂಡು ಮಹಾಚೇತನಕ್ಕೆ ನಮನ ಸಲ್ಲಿಸಿದರು. ರಾಜ್ಯಪಾಲ ವಿದ್ಯಾಸಾಗರ ರಾವ್ ಮತ್ತು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಪ್ರಧಾನಿ ಸೇರಿದಂತೆ ಸಂವಿಧಾನಶಿಲ್ಪಿಗೆ ಗಣ್ಯರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
Comments