ಅದಾನಿ ಕಂಪೆನಿಗೆ ಸಿದ್ದರಾಮಯ್ಯ ಮಣೆ ಹಾಕಿದ್ದಾರೆ ಎಂದು ಎಚ್ ಡಿಕೆ ಆರೋಪ

‘ನಮ್ಮ ಸರ್ಕಾರದ ಅವಧಿಯಲ್ಲಿ ಕಪ್ಪುಪಟ್ಟಿಗೆ ಸೇರಿಸಿದ್ದ ಅದಾನಿ ಕಂಪೆನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಣೆ ಹಾಕಿದ್ದಾರೆ’ ಎಂದು ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು. ಅದಾನಿ ಕಂಪೆನಿ ಗುಜರಾತ್ ಮತ್ತು ಮಧ್ಯ ಪ್ರದೇಶದಲ್ಲಿ ಚೆನ್ನಾಗಿ ವ್ಯಾಪಾರ ಮಾಡಿಕೊಂಡಿದೆ. ವಿದ್ಯುತ್ ಪಡೆಯದಿದ್ದರೂ ಒಪ್ಪಂದದ ಪ್ರಕಾರ ಎರಡು ರಾಜ್ಯ ಸರ್ಕಾರಗಳು ಹಣ ಪಾವತಿಸುತ್ತಿವೆ. ಅದೇ ಕಂಪೆನಿಯಿಂದ ವಿದ್ಯುತ್ ಖರೀದಿಗೆ ಈಗ ರಾಜ್ಯ ಸರ್ಕಾರ ಮುಂದಾಗಿದೆ’ ಎಂದು ದೂರಿದರು.
ಮುಂಬರುವ ವಿಧಾನ ಸಭಾ ಚುನಾವಣೆಯ ಬಗ್ಗೆ ಮಾತನಾಡಿದ ಎಚ್ ಡಿಕೆ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಹೋಗದೆ ಮನೆಯಲ್ಲಿದ್ದರೂ ನಾವು 50ರಿಂದ 60 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಕಳೆದ ಚುನಾವಣೆಯಲ್ಲಿ ಗೆಲ್ಲಲೇಬೇಕಿದ್ದ 30 ಕ್ಷೇತ್ರಗಳಲ್ಲಿ ನಮ್ಮ ಪಕ್ಷದಲ್ಲಿನ ಅಭ್ಯರ್ಥಿಗಳ ಪೈಪೋಟಿಯನ್ನು ಸರಿಯಾಗಿ ನಿಭಾಯಿಸದ ಕಾರಣಕ್ಕೆ ಸೋತಿದ್ದೇವೆ. ಈ ಬಾರಿ ಬಂಡಾಯಕ್ಕೆ ಅವಕಾಶ ನೀಡದೆ ಸೌಹಾರ್ದವಾಗಿ ಬಗೆಹರಿಸುತ್ತೇವೆ ಎಂದು ಹೇಳಿದರು. ಎರಡು ಸಾರ್ವತ್ರಿಕ ಚುನಾವಣೆಗಳಲ್ಲಿ 224 ಕ್ಷೇತ್ರಗಳಲ್ಲೂ ಪ್ರಚಾರ ನಡೆಸಿದ್ದೆ. ಹೀಗಾಗಿ ಗೆಲ್ಲುವ ಸಾಮರ್ಥ್ಯ ಇರುವ ಕ್ಷೇತ್ರಗಳಿಗೆ ಹೆಚ್ಚು ಗಮನ ಕೊಡಲು ಸಾಧ್ಯವಾಗಲಿಲ್ಲ. ಅದೇ ತಪ್ಪನ್ನು ಈ ಬಾರಿ ಮಾಡುವುದಿಲ್ಲ ಎಂದರು.
Comments