ಡಿ.23ಕ್ಕೆ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸುವ ಸಾಧ್ಯತೆ

ಈಗಾಗಲೇ ರಾಹುಲ್ ಗಾಂಧಿಗೆ ರಾಜ್ಯಕ್ಕೆ ಆಗಮಿಸುವಂತೆ ಮನವಿ ಮಾಡಿದ್ದು, ಮೊದಲ ಸಮಾವೇಶವನ್ನು ಹುಬ್ಬಳ್ಳಿ-ಧಾರವಾಡ ಅಥವಾ ಚಿಕ್ಕಮಗಳೂರಿನಲ್ಲಿ ಮಾಡುವ ಕುರಿತು ರಾಜ್ಯ ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ.
ಹುಬ್ಬಳ್ಳಿ ಧಾರವಾಡದಲ್ಲಿ ಬೃಹತ್ ಸಮಾವೇಶ ಮಾಡಿದರೆ, ರಾಜ್ಯದ ಎಲ್ಲ ಭಾಗದ ಕಾರ್ಯಕರ್ತರು ಭಾಗವಹಿಸಲು ಅನುಕೂಲವಾಗಲಿದೆ. ಅಲ್ಲದೇ ಇದೊಂದು ಐತಿಹಾಸಿಕ ಕಾರ್ಯಕ್ರಮವನ್ನಾಗಿ ಮಾಡಿ 2018ರ ಚುನಾವಣೆಗೆ ದೊಡ್ಡ ಸಂದೇಶ ರವಾನೆ ಮಾಡಲು ಅನುಕೂಲವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲು ಪಕ್ಷದ ರಾಜ್ಯಾಧ್ಯಕ್ಷ ಪರಮೇಶ್ವರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
Comments