ರಾಹುಲ್ ಗಾಂಧಿ ಡಿಸೆಂಬರ್ 23ರಂದು ಚಿಕ್ಕಮಂಗಳೂರಿಗೆ

ಬೆಂಗಳೂರು: ಎಐಸಿಸಿ ಅಧ್ಯಕ್ಷರಾಗುತ್ತಿರುವ ರಾಹುಲ್ ಗಾಂಧಿ ಚಿಕ್ಕಮಗಳೂರಿಗೆ ಡಿ.23ರಂದು ಚಿಕ್ಕಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಬೆಂಗಳೂರು: ಎಐಸಿಸಿ ಅಧ್ಯಕ್ಷರಾಗುತ್ತಿರುವ ರಾಹುಲ್ ಗಾಂಧಿ ಚಿಕ್ಕಮಗಳೂರಿಗೆ ಡಿ.23ರಂದು ಚಿಕ್ಕಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. 23ರಂದು ಚಿಕ್ಕಮಂಗಳೂರಿನಲ್ಲಿ ಆಯೋಜಿಸಲಾಗಿರುವ ಇಂದಿರಾಗಾಂಧಿ ಜನ್ಮಶತಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ರಾಹುಲ್ ಗಾಂಧಿ ಆಗಮಿಸುವ ಸಾಧ್ಯತೆ ಇದೆ.
ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪ್ರಚಾರಕ್ಕೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ರಾಹುಲ್ ಗಾಂಧಿ ಚಾಲನೆ ನೀಡಲಿದ್ದಾರೆ. ಈ ನಡುವೆ ಹುಬ್ಬಳ್ಳಿ ಧಾರವಾಡ ಅಥವಾ ದಾವಣಗೆರೆ ಯಲ್ಲಿ ಅದ್ಧೂರಿ ಅಭಿನಂದನಾ ಸಮಾವೇಶ ಹಮ್ಮಿಕೊಳ್ಳಲು ಕೆಪಿಸಿಸಿ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಇದೇ ವೇಳೆ 86 ಶಾಸಕರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಎಐಸಿಸಿ ಅಧ್ಯಕ್ಷರಾದ ನಂತರ ರಾಜ್ಯಕ್ಕೆ ನೀಡುವ ಮೊದಲ ಭೇಟಿ ಇದು ಎನ್ನಲಾಗುತ್ತಿದೆ. ಈ ವೇಳೆ ರಾಜ್ಯದ ವಿವಿಧ ಘಟಾನುಘಟಿಗಳಾದ ಕಾಂಗ್ರೆಸ್ ನಾಯಕರ ಜತೆಗೆ ಹಲವಾರು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.
Comments