ಪಕ್ಷಭೇದ ಮಾಡದೆ ಅಭಿವೃದ್ಧಿ ಕೆಲಸ ಮಾಡಿದ ತೃಪ್ತಿ ನನಗಿದೆ : ಮಧು ಬಂಗಾರಪ್ಪ

ಕಾಸ್ವಾಡಿಕೊಪ್ಪ, ಕೊಡಕಣಿ ಗ್ರಾಮದಲ್ಲಿ ನಮ್ಮ ಗ್ರಾಮ ನಮ್ಮ ರಸ್ತೆ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ವಿರೋಧ ಪಕ್ಷದ ಶಾಸಕನಾಗಿದ್ದರೂ, ತಾಲೂಕಿನ ಸಮಗ್ರ ಅಭಿವೃದ್ಧಿಗೆ ಸಮರ್ಪಕ ಅನುದಾನ ತಂದು ಅಭಿವೃದ್ಧಿಪಡಿಸಿರುವುದು ನನಗೆ ಮುಂಬರುವ ಚುನಾವಣೆಗೆ ಶ್ರೀರಕ್ಷೆಯಾಗಲಿದೆ.
ನಾಲ್ಕೂವರೆ ವರ್ಷದಲ್ಲಿ ಎಲ್ಲ ಸ್ಥಳೀಯ ಮಟ್ಟದ ಜನಪ್ರತಿನಿಧಿಗಳ ವಿಶ್ವಾಸ ಪಡೆದು, ಯಾವುದೇ ಪಕ್ಷಭೇದ ಮಾಡದೆ ಅಭಿವೃದ್ಧಿ ಕೆಲಸ ಮಾಡಿದ ತೃಪ್ತಿ ನನಗಿದೆ ಎಂದು ಶಾಸಕ ಮಧು ಬಂಗಾರಪ್ಪ ಹೇಳಿದರು. ತಾಲೂಕಿನಾದ್ಯಂತ ನೂರಾರು ರಸ್ತೆ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದೆ. ಇವುಗಳ ಗುಣಮಟ್ಟ ಕಾಪಾಡಿಕೊಳ್ಳುವಲ್ಲಿ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಇಲ್ಲದಿದ್ದರೆ ಅಧಿಕಾರಿಗಳನ್ನು ನೇರ ಹೊಣೆ ಮಾಡಲಾಗುವುದು ಮತ್ತು ಚಾಲನೆಯಲ್ಲಿರುವ ಕಾಮಗಾರಿಗಳನ್ನು ಇನ್ನೆರಡು ತಿಂಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದರು.
Comments