ಕಾಂಗ್ರೆಸ್ ರಾಜ್ಯದಲ್ಲಿ ಅತ್ಯಂತ ಬಲಿಷ್ಠವಾಗಿದೆ
ಬೆಂಗಳೂರು: ನಾವು ಮತ್ತೇ ಅಧಿಕಾರಕ್ಕೆ ಬರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಈ ವೇಳೆ ಖಾಸಗಿ ಸುದ್ದಿ ವಾಹಿನಿಗಳ ಜತೆಗೆ ಮಾತನಾಡಿದ್ದಾರೆ.
ಸಮೀಕ್ಷಾ ವರದಿ ಪ್ರಕಟಿಸಿರುವಂತೆ ಫಲಿತಾಂಶ ಬರುವುದಿಲ್ಲ ಚುನಾವಣಾ ಸಮೀಕ್ಷೆಗಳು ಸಂಪೂರ್ಣವಾಗಿ ನಂಬಲರ್ಹವಲ್ಲ, ನಾವು ಆಂತರಿಕವಾಗಿ ಸಮೀಕ್ಷೆ ಮಾಡಿಸಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸ್ಥಿತಿ ಹೇಗಿದೆ ಎಂಬುದು ನನಗೆ ಗೊತ್ತಿದೆ ಎಂದರು. ಇನ್ನು ಮಾತನಾಡುತ್ತಿದ್ದ ಅವರು, ಆದರೆ ಇದನ್ನು ಈಗಲೇ ಬಹಿರಂಗ ಪಡಿಸುವುದು ಸಾಧ್ಯವಿಲ್ಲ, ಜಾತ್ಯಾತೀತ ಪಕ್ಷವಾಗಿ ಕಾಂಗ್ರೆಸ್ ರಾಜ್ಯದಲ್ಲಿ ಅತ್ಯಂತ ಬಲಿಷ್ಠವಾಗಿದೆ. ಹೀಗಾಗಿ ರಾಜ್ಯದಲ್ಲಿ ಕೋಮುವಾದಿಗಳನ್ನು ಮಟ್ಟ ಹಾಕಲು ಬೇರೆಯವರ ಸಹಾಯ ಪಡೆಯಬೇಕಾಗಿದ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿದರು.
Comments