ಬಹು ನಿರೀಕ್ಷಿತ ಪರಿವರ್ತನಾ ರಥಯಾತ್ರೆ ಯಶಸ್ವಿ

ಬಿಜೆಪಿ ಮೊದಲ ಬಾರಿಗೆ ಬಹು ನಿರೀಕ್ಷಿತ ಪರಿವರ್ತನಾ ರಥಯಾತ್ರೆಯನ್ನು ಯಶಸ್ವಿಯಾಗಿ ನಡೆಸಿತು. ಜೆಪಿ ನಗರದ ಆರ್‍ಬಿಐ ಲೇಔಟ್‍ನ ಆಟದ ಮೈದಾನದಲ್ಲಿ ನಡೆದ ಸಮಾವೇಶಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಅನಂತ್‍ಕುಮಾರ್, ಸಂಸದರಾದ ಶೋಭಾ ಕರಂದ್ಲಾಜೆ, ಪಿ.ಸಿ.ಮೋಹನ್, ಮುಖಂಡರಾದ ಆರ್.ಅಶೋಕ್ ಸೇರಿದಂತೆ ಪಕ್ಷದ ಮುಖಂಡರು ಭಾಗವಹಿಸಿದ್ದರು.
ರಾಜಧಾನಿಯಲ್ಲಿ ಇದೇ ಮೊದಲ ಬಾರಿಗೆ ಪರಿವರ್ತನಾ ರಥಯಾತ್ರೆ ನಡೆದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರನ್ನು ಕರೆತರಲಾಗಿತ್ತು. ಈ ಹಿಂದೆ ಬೆಂಗಳೂರು ಹೊರವಲಯದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನಡೆದ ಉದ್ಘಾಟನಾ ಸಮಾರಂಭದ ವೇಳೆ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸದಿದ್ದುದು ಬಿಜೆಪಿಗೆ ಭಾರೀ ಮುಜುಗರ ತಂದಿತ್ತು. ಇದನ್ನು ಸವಾಲಾಗಿ ಸ್ವೀಕರಿಸಿದ್ದ ಶಾಸಕರಾದ ಎಂ.ಕೃಷ್ಣಪ್ಪ, ವಿಜಯ್‍ಕುಮಾರ್, ಸತೀಶ್ ರೆಡ್ಡಿ, ಮುನಿರಾಜು, ಆರ್.ಅಶೋಕ್ ಸೇರಿದಂತೆ ಮತ್ತಿತರ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಕರೆತರುವ ಮೂಲಕ ಶಕ್ತಿ ಪ್ರದರ್ಶಿಸಿದ್ದಾರೆ.
Comments