ಗುಜರಾತ್‌ನಲ್ಲಿ ಬಿಜೆಪಿಯನ್ನು ಸೋಲಿಸುವ ಶಕ್ತಿ ಕಾಂಗ್ರೆಸ್‌ಗೆ ಇಲ್ಲ : ಎಚ್ ಡಿಕೆ

11 Dec 2017 11:56 AM | Politics
331 Report

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಟಿಪ್ಪು ಜಯಂತಿ ಹೆಸರಿನಲ್ಲಿ ಅಶಾಂತಿ ಉಂಟು ಮಾಡಿದ್ದಾರೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.ನಗರದಲ್ಲಿ ನಡೆದ ಜೆಡಿಎಸ್‌ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್‌ಗೆ ಗುಜರಾತ್‌ನಲ್ಲಿ ಬಿಜೆಪಿಯನ್ನು ಸೋಲಿಸುವ ಶಕ್ತಿ ಇಲ್ಲದೆ ಇರುವುದು ದುರಂತ ಎಂದು ವಿಷಾದಿಸಿದರು.

ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಟಿಪ್ಪುಜಯಂತಿ ಹೆಸರಿನಲ್ಲಿ ಅಶಾಂತಿ ಉಂಟು ಮಾಡಿದ್ದಾರೆ. ಆದರೆ, ಮುಸ್ಲಿಮರಿಗೆ ರಾಜ್ಯದಲ್ಲಿ ಸ್ವತಂತ್ರವಾಗಿ ಬದುಕಲು ಆತ್ಮಸ್ಥೈರ್ಯ ತುಂಬಿದ್ದು ಜೆಡಿಎಸ್‌. ದತ್ತ ಪೀಠ ವಿಚಾರದಲ್ಲಿ ಸರ್ಕಾರ ಬೀಳುತ್ತೆ ಎಂದು ಚಿಂತಿಸದೆ ಬಿಜೆಪಿಯವರ ಮೇಲೆ ಕ್ರಮ ಜರುಗಿಸಿದ್ದು ಜೆಡಿಎಸ್‌. ದೇಶದಲ್ಲಿ ಮತ್ತೂಮ್ಮೆ ಜಾತ್ಯತೀತ ಶಕ್ತಿಗಳು ಒಂದೇ ಸೂರಿನಡಿ ಒಗ್ಗೂಡುವ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನಗಳು ನಡೆಯಬೇಕಿದೆ. ಅದರ ನೇತೃತ್ವವನ್ನು ನ್ಯಾಷನಲ್‌ ಕಾನ್ಫರೆನ್ಸ್‌ನ ಫಾರೂಕ್‌ ಅಬ್ದುಲ್ಲಾ ಅವರೇ ವಹಿಸಬೇಕು. 1994ರಲ್ಲಿ ಫಾರೂಕ್‌ ಅಬ್ದುಲ್ಲಾ ಬೆಂಗಳೂರಿಗೆ ಬಂದಿದ್ದರು. ಆಗ ದೇವೇಗೌಡರು ಮುಖ್ಯಮಂತ್ರಿಯಾಗಿದ್ದರು. ಈಗ ಮತ್ತೆ ಬಂದಿದ್ದಾರೆ. ನಾನು ಅವರಿಗೆ ಆಭಾರಿಯಾಗಿರುತ್ತೇನೆ' ಎಂದರು.


 

Edited By

Shruthi G

Reported By

Shruthi G

Comments