ಸದ್ಯದಲ್ಲೇ ಪ್ರಜಾಕೀಯ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ
ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ(ಕೆಪಿಜೆಪಿ)ಗೆ ಚಿಹ್ನೆಯಾಗಿ ಆಟೊ ಗುರುತು ಸಿಕ್ಕಿದೆ. ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡುವುದಾಗಿ ಪಕ್ಷದ ಸಂಸ್ಥಾಪಕ ಹಾಗೂ ನಟ ಉಪೇಂದ್ರ ಶನಿವಾರ ನಡೆದ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.
'ಬೇರೆ ಪಕ್ಷದವರು ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇವೆ. ಆದರೆ, ಅವರಿಗೆ ವಿಶೇಷ ಆತಿಥ್ಯ ಸಿಗುವುದಿಲ್ಲ. ಟಿಕೆಟ್ ಬೇಕಿದ್ದರೆ ಮಾನದಂಡಗಳ ಪ್ರಕಾರ ಕ್ಷೇತ್ರದ ಅಧ್ಯಯನ ಮಾಡಿರಬೇಕು. ಅಭಿವೃದ್ಧಿಯ ನೀಲನಕ್ಷೆ ಅವರ ಕೈಯಲ್ಲಿರಬೇಕು. ಯಾವ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಬೇಕು ಎಂದು ನಾನಿನ್ನೂ ನಿರ್ಧರಿಸಿಲ್ಲ' ಎಂದು ಪ್ರತಿಕ್ರಿಯಿಸಿದ್ದಾರೆ. 'ಪಕ್ಷ ಎಷ್ಟು ಸೀಟುಗಳನ್ನು ಗೆಲ್ಲುತ್ತದೆ ಎಂಬುದು ಮುಖ್ಯವಲ್ಲ. ಸತ್ಯದ ಹಾದಿಯಲ್ಲಿ ಇಡುವ ಒಂದೊಂದು ಹೆಜ್ಜೆಯೂ ನಮಗೆ ಗೆಲುವು. ಕಾಣಿಸುವ ರಾಜಕಾರಣ ಬೇರೆ. ಕಾಣಿಸದ ನಮ್ಮ ಪ್ರಜಾಕಾರಣವೇ ಬೇರೆ. ವ್ಯವಸ್ಥೆ ಬದಲಾಯಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದ್ದೇನೆ' ಎಂದಿದ್ದಾರೆ.
Comments