ಮಾಜಿ ಶಾಸಕ ಚಿಕ್ಕಣ್ಣ ಜೆಡಿಎಸ್ ಸೇರ್ಪಡೆಗೆ ಮೂಹರ್ತ ಫಿಕ್ಸ್

ಎಚ್.ಡಿ ಕೋಟೆ ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ ಜೆಡಿಎಸ್ ಸೇರ್ಪಡೆಗೆ ಮೂಹರ್ತ ಫಿಕ್ಸ್ ಆಗಿದ್ದು, ಡಿಸೆಂಬರ್ 13 ರಂದು ಬೆಂಗಳೂರಿನಲ್ಲಿ ಜೆಡಿಎಸ್ ವರಿಷ್ಟರ ಸಮ್ಮೂಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.
ಎಚ್.ಡಿ ಕೋಟೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಶಾಸಕ ಚಿಕ್ಕಮಾದು ಅಕಾಲಿಕ ಮರಣ ನಂತರ ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಯಲು ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ ಈಗಾಗಲೇ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದರು.ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ ಜೆಡಿಎಸ್ ಸೇರ್ಪಡೆಗೆ ಜೆಡಿಎಸ್ ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಸಮ್ಮತಿಸಿದ್ದು, ಡಿಸೆಂಬರ್ 13 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮಾವೇಶದಲ್ಲಿ ದೇವೇಗಡರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.
ಈ ಹಿಂದೆ ಕಾಂಗ್ರೆಸ್ ಪಕ್ಷದಿಂದ ಗೆದ್ದು ಎಚ್.ಡಿ. ಕೋಟೆ ಶಾಸಕರಾಗಿದ್ದ ಚಿಕ್ಕಣ್ಣ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತ್ತಿದ್ದರು. ನಂತರ ಸಂಸದ ಧ್ರುವ ನಾರಾಯಣ್ ಮೇಲಿನ ಅಸಮಾಧಾನದಿಂದ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡು ಕಳೆದ ಎರಡು ತಿಂಗಳ ಹಿಂದೆ ಬಿಜೆಪಿಗೂ ರಾಜೀನಾಮೆ ಕೊಟ್ಟು ಪುನಃ ಕಾಂಗ್ರೆಸ್ ಸೇರಲು ಸಿದ್ದತೆ ನಡೆಸಿದರು. ಆದರೆ ಸಂಸದ ಧ್ರುವನಾರಾಯಣ್ ಚಿಕ್ಕಣ್ಣ ಕಾಂಗ್ರೆಸ್ ಸೇರ್ಪಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರಿಂದ ಜೆಡಿಎಸ್‌ನತ್ತ ಮುಖ ಮಾಡಿದ್ದಾರೆ.
Comments