ಜೆಡಿಎಸ್ ರಣಕಹಳೆ: ಅಲ್ಪಸಂಖ್ಯಾತರ ಸಮಾವೇಶಕ್ಕೆ ಹರಿದುಬಂದ ಜನ ಸಾಗರ
ವಿಧಾನಸಭಾ ಚುನಾವಣೆಯ ಪ್ರಮುಖ ಅಸ್ತ್ರವೆಂದೇ ಬಿಂಬಿತವಾಗಿರುವ ಈ ಸಮಾವೇಶಕ್ಕೆ ಉತ್ತರ ಕರ್ನಾಟಕದ ಜಿಲ್ಲೆಗಳು, ದ.ಕ. ಜಿಲ್ಲೆಗಳು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು ನಗರ, ತುಮಕೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಿದ್ದು, ಸಮಾವೇಶ ಆಯೋಜಿಸಿದ್ದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನ ಕಾರ್ಯಕರ್ತರಿಂದ ಕಿಕ್ಕಿರಿದು ತುಂಬಿತ್ತು.
ಸಮಾವೇಶದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದ ಕಾರ್ಯಕರ್ತರು ಸುಡುವ ಬಿಸಿಲನ್ನೂ ಲೆಕ್ಕಿಸದೆ ತಮ್ಮ ನೆಚ್ಚಿನ ನಾಯಕರ ಭಾಷಣಕ್ಕಾಗಿ ಕಾದು ಕುಳಿತಿದ್ದು ವಿಶೇಷವಾಗಿತ್ತು. ರಾಜ್ಯದಲ್ಲಿ ನಾಲ್ಕೂವರೆ ವರ್ಷಗಳ ಆಡಳಿತ ನಡೆಸಿರುವ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ನಾಯಕರಿಗೆ ಜೆಡಿಎಸ್ ನಾಯಕರು ಅಲ್ಪಸಂಖ್ಯಾತರ ಸಮಾವೇಶದ ಮೂಲಕ ಚುನಾವಣಾ ರಣಕಹಳೆ ಮೊಳಗಿಸಿದರು.
ಸಮಾವೇಶದ ಕೇಂದ್ರ ಬಿಂದುಗಳಾದ ಜಮ್ಮು-ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ವೇದಿಕೆಗೆ ಆಗಮಿಸುತ್ತಿದ್ದಂತೆ, ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದ ಪಕ್ಷದ ಕಾರ್ಯಕರ್ತರ ಜಯಘೋಷ, ಜೈಕಾರಗಳು ಮುಗಿಲು ಮುಟ್ಟಿದವು.
Comments