2595 ಜನರಿಗೆ ಉದ್ಯೋಗಾವಕಾಶ

11 Dec 2017 6:57 PM | Politics
252 Report

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಉನ್ನತ ಮಟ್ಟದ ಸಭೆ ನಡೆಯಿತು. ಈ ಸಭೆಯಲ್ಲಿ ಪ್ರಮುಖವಾಗಿ 3427 ಕೋಟಿ ರೂ ಬಂಡವಾಳ ಹೂಡಿಕೆಯ ನಾಲ್ಕು ಹೊಸ ಯೋಜನೆಗಳಿಗೆ ಅನುಮತಿ ನೀಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಉನ್ನತ ಮಟ್ಟದ ಸಭೆ ನಡೆಯಿತು. ಈ ಸಭೆಯಲ್ಲಿ ಪ್ರಮುಖವಾಗಿ 3427 ಕೋಟಿ ರೂ ಬಂಡವಾಳ ಹೂಡಿಕೆಯ ನಾಲ್ಕು ಹೊಸ ಯೋಜನೆಗಳಿಗೆ ಅನುಮತಿ ನೀಡಲಾಗಿದ್ದು, ಇದಕ್ಕಾಗಿ ಈಗ ಜನರಿಗೆ 2595 ಜನರಿಗೆ ಉದ್ಯೋಗಾವಕಾಶ ಲಭ್ಯವಾಗಲಿದೆ.

ಮೆ. ಸಿಡಿಸಿ ಡೆವಲೆಪ್ ಮೆಂಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ 740ಕೋಟಿ ರೂ ವೆಚ್ಚದಲ್ಲಿ ಬೆಂಗಳೂರಿನಲ್ಲಿ ತಂತ್ರಜ್ಞಾನ ಅನ್ವೇಷಣಾ ಅಂತರಾಷ್ಟ್ರೀಯ ಪಾರ್ಕ್ ಸ್ಥಾಪಿಸಲಿದ್ದು, ಇದಕ್ಕೆ ಸಮಿತಿ ಒಪ್ಪಿಗೆ ನೀಡಿದೆ. ಮೆ. ಇಂಡಿಯನ್ ಕೋಸ್ಟ್ ಗಾರ್ಡ್ ಕಂಪನಿ ರೂ ವೆಚ್ಚದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರಾವಳಿ ರಕ್ಷಣಾ ಪಡೆ ತರಬೇತಿ ಕೇಂದ್ರ ಸ್ಥಾಪಿಸಲು ಮುಂದಾಗಿದ್ದು, ಇದಕ್ಕೂ ಸಮಿತಿಯ ಒಪ್ಪಿಗೆ ಸಿಕ್ಕಿದೆ.

ಮೆ. ಯೂನಿವರ್ಸಲ್ ಬಿಲ್ಡರ್ಸ್ 525 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನಲ್ಲಿ ವಸತಿ ಯೋಜನೆ ಆರಂಭಿಸಲಿದ್ದು, ಸಮಿತಿ ಒಪ್ಪಿಗೆ ನೀಡಿದೆ.

 

 

Edited By

Hema Latha

Reported By

Sudha Ujja

Comments