ಸಾಮರಸ್ಯ ನಡಿಗೆಗೆ ಆರಂಭದಲ್ಲಿಯೇ ವಿಘ್ನ

ಕರಾವಳಿಯಲ್ಲಿ ರಮಾನಾಥ ರೈ ಅವರ ನೇತೃತ್ವದಲ್ಲಿ ನಡೆಯಬೇಕಿದ್ದ ಸಾಮರಸ್ಯ ನಡಿಗೆಗೆ ಆರಂಭದಲ್ಲಿಯೇ ವಿಘ್ನ ಉಂಟಾಗಿದೆ. ಎರಡು ಕೆಎಸ್ಆರ್ಟಿಸಿ ಬಸ್ಗಳಿಗೆ ಕಲ್ಲು ತೂರಾಟ ಮಾಡಲಾಗಿದೆ. ಚಿತ್ರನಟ ಪ್ರಕಾಶ್ ರೈ, ಮಾಜಿ ಸಚಿವ ಅಮರನಾಥ ಶೆಟ್ಟಿ ಸೇರಿದಂತೆ ವಿವಿಧ ಪಕ್ಷ, ಸಂಘಟನೆಗಳ ಮುಖಂಡರು, ನಾಯಕರ ಸಮ್ಮುಖದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಬಲೂನುಗಳನ್ನು ಹಾರಿಸುವ ಮೂಲಕ ನಡಿಗೆಗೆ ಚಾಲನೆ ನೀಡಿದರು.
ಬೆಳಿಗ್ಗೆ 10 ಗಂಟೆಯ ವೇಳೆಗೆ ನಡಿಗೆಗೆ ಚಾಲನೆ ಸಿಗಬೇಕಿರುವ ಕಾರ್ಯಕ್ರಮಕ್ಕೆ ಕಿಡಿಗೇಡಿಗಳು ಅಡ್ಡಿ ಪಡಿಸಿದ್ದಾರೆ. ಇಲ್ಲಿನ ಹೊರ ವಲಯದಲ್ಲಿರುವ ಪರಂಗಿಪೇಟೆಯಲ್ಲಿ ಮೈಸೂರಿನಿಂದ ಮಂಗಳೂರಿಗೆ ಬರುತ್ತಿದ್ದ ಬಸ್ಗಳಿಗೆ ಕಲ್ಲು ಹೊಡೆಯಲಾಗಿದೆ. ಕಾರ್ಯಕ್ರಮಕ್ಕೆ 500 ಕ್ಕಿಂತ ಹೆಚ್ಚು ಪೊಲೀಸ್ ಹಾಗೂ 300 KSRP ಪೊಲೀಸರ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಸಾಮರಸ್ಯ ನಡಿಗೆಯಲ್ಲಿ ನಟ ಪ್ರಕಾಶ್ ರಾಜ್, ಸಿಪಿಎಂ ಮುಖಂಡರು ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.
Comments