ಇಡೀ ಕರಾವಳಿ ಭಾಗ ಹೊತ್ತಿ ಉರಿಯಲಿದೆ : ಕರಂದ್ಲಾಜೆ ಎಚ್ಚರಿಕೆ

ಹೊನ್ನಾವರದಲ್ಲಿ ಪರೇಶ್ ಮೇಸ್ತಾ ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸೂಕ್ತ ರೀತಿಯಲ್ಲಿ ಮಾಡದಿದ್ದರೆ "ಕರಾವಳಿ ಹೊತ್ತಿ ಉರಿಯಲಿದೆ" ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಎಚ್ಚರಿಸಿದ್ದಾರೆ.
ಹೊನ್ನಾವರದಲ್ಲಿ ಇತ್ತೀಚೆಗೆ ನಡೆದ ಪರೇಶ್ ಮೇಸ್ತಾ ನಿಗೂಢ ಸಾವು ಸೇರಿದಂತೆ ರಾಜ್ಯದಲ್ಲಿ ನಡೆದ ಸಂಘ ಪರಿವಾರದ ಕಾರ್ಯಕರ್ತರ ಹತ್ಯೆ ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ಆಗ್ರಹಿಸಿ ಬಿಜೆಪಿ ರಾಜ್ಯ ಮುಖಂಡರು ನಗರದಲ್ಲಿಂದು ವಿಧಾನಸೌಧದ ಬಳಿ ಡಾ.ಅಂಬೇಡ್ಕರ್ ಪ್ರತಿಮೆ ಬಳಿಯಿಂದ ರಾಜಭವನಕ್ಕೆ ಮೆರವಣಿಗೆ ಮೂಲಕ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಮೆರವಣಿಗೆಯನ್ನುದ್ದೇಶಿಸಿ ಮಾತನಾಡಿದ ಶೋಭಾ ಕರಂದ್ಲಾಜೆ, ರಾಜ್ಯದಲ್ಲಿ ಇಪ್ಪತ್ತಕ್ಕೂ ಹೆಚ್ಚು ಸಂಘ ಪರಿವಾರದ ಕಾರ್ಯಕರ್ತರ ಕೊಲೆ ಆಗಿದೆ. ಆದರೆ, ಇದವರೆಗೂ ರಾಜ್ಯ ಸರ್ಕಾರ ಒಂದು ಪ್ರಕರಣವನ್ನೂ ಭೇದಿಸಿಲ್ಲ. ಆದರೆ ಈಗ ಪರೇಶ್ ಮೇಸ್ತಾ ಸಾವು ಪ್ರಕರಣದ ತನಿಖೆ ಸೂಕ್ತ ರೀತಿಯಲ್ಲಿ ಆಗದಿದ್ದರೆ, ಇಡೀ "ಕರಾವಳಿ ಭಾಗ ಹೊತ್ತಿ ಉರಿಯಲಿದೆ" ಎಂದು ಬೆದರಿಕೆ ಹಾಕಿದ್ದಾರೆ.
Comments