ಮೂರು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಘೋಷಣೆ

2018ರ ಚುನಾವಣಾ ಪ್ರಚಾರಕ್ಕಾಗಿ ನವ ಕರ್ನಾಟಕ ಪರಿವರ್ತನಾ ಯಾತ್ರೆ ನಡೆಸುತ್ತಿರುವ ಕರ್ನಾಟಕ ಬಿಜೆಪಿ, ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತಿದೆ.ಎಲ್ಲಾ ರಾಜಕೀಯ ಪಕ್ಷಗಳಿಗೂ ಮೊದಲೇ ಪ್ರಚಾರ ಕಾರ್ಯ ಆರಂಭಮಾಡಿರುವ ಬಿಜೆಪಿ, ಚುನಾವಣೆ ದಿನಾಂಕ ಘೋಷಣೆಗೂ ಮೊದಲೇ ಅಭ್ಯರ್ಥಿಗಳ ಹೆಸರು ಪ್ರಕಟಿಸುವ ಮೂಲಕ ಚುನಾವಣೆಗೆ ನಾವು ಸಿದ್ಧ ಎಂಬ ಸಂದೇಶವನ್ನು ಉಳಿದ ಪಕ್ಷಗಳಿಗೆ ರವಾನೆ ಮಾಡುತ್ತಿದೆ.
ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿ ನಡೆದ ಪರಿವರ್ತನಾ ಯಾತ್ರೆಯ ಸಮಾವೇಶದಲ್ಲಿ ಯಡಿಯೂರಪ್ಪ ಅವರು, ಪ್ರಕಾಶ್ ಖಂಡ್ರೆ ಅವರು 2018ರ ಚುನಾವಣೆ ಅಭ್ಯರ್ಥಿ ಎಂದು ಘೋಷಣೆ ಮಾಡಿದರು. ಬೀದರ್‌ನ ಗಣೇಶ ಮೈದಾನದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆ ಸಮಾವೇಶದಲ್ಲಿ ಯಡಿಯೂರಪ್ಪ ಅವರು, ‘ಈ ಸಮಾವೇಶದ ಕೇಂದ್ರ ಬಿಂದು ಭಾವಿ ಶಾಸಕ ಸೂರ್ಯಕಾಂತ ನಾಗಮಾರಪಲ್ಲಿ ಅವರೇ' ಎಂದು ಮಾತು ಆರಂಭಿಸಿದರು.
ನೂರಾರು ಅಭಿಮಾನಿಗಳು ಚಪ್ಪಾಳೆ ತಟ್ಟಿ ಯಡಿಯೂರಪ್ಪ ಮಾತನ್ನು ಸ್ವಾಗತಿಸಿದರು. ಭಾಷಣದ ಕೊನೆಗೆ 'ನಮ್ಮ ಅಭ್ಯರ್ಥಿ ಗೆಲ್ಲಿಸಿ' ಎಂದು ಸೂರ್ಯಕಾಂತ ನಾಗಮಾರಪಲ್ಲಿ ಅವರತ್ತ ಕೈ ತೋರಿಸಿ, 2018ರ ಚುನಾವಣೆಗೆ ಅವರೇ ಅಭ್ಯರ್ಥಿ ಎಂದು ಪರೋಕ್ಷವಾಗಿ ಘೋಷಿಸಿದರು.ಔರಾದ್‌ನಲ್ಲಿ ನಡೆದ ಸಮಾವೇಶದಲ್ಲಿ ಯಡಿಯೂರಪ್ಪ ಕ್ಷೇತ್ರದ ಅಭ್ಯರ್ಥಿಯನ್ನು ಪ್ರಕಟಿಸಿದರು. ಹಾಲಿ ಶಾಸಕ ಪ್ರಭು ಚವ್ಹಾಣ್ ಅವರು 2018ರ ಅಭ್ಯರ್ಥಿ ಎಂದು ಘೋಷಣೆ ಮಾಡಿದರು.
Comments