ಸಿದ್ದರಾಮಯ್ಯ ಸಿಎಂ ಆಗಲು ನಡೆಸಿದ ಪಿತೂರಿಯನ್ನು ಬಿಚ್ಚಿಟ್ಟ ದೇವೇಗೌಡ್ರು
ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಪಿತೂರಿ ನಡೆಸಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಅರಮನೆ ಮೈದಾನದಲ್ಲಿ ದಲಿತರ ಬೃಹತ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಟು ವಾಗ್ದಾಳಿ ನಡೆಸಿರುವ ದೇವೇಗೌಡ ಅವರು, ಕಾಂಗ್ರೆಸ್‍ನಲ್ಲಿ ಮೂಲ ಕಾಂಗ್ರೆಸ್ ಮತ್ತು ನಕಲಿ ಕಾಂಗ್ರೆಸ್ ಪ್ರತ್ಯೇಕವಾಗಿ ಯಾತ್ರೆ ನಡೆಸುತ್ತಿದ್ದು, ಅದರಲ್ಲಿ ಸಿದ್ದರಾಮಯ್ಯ ನಕಲಿ ಕಾಂಗ್ರೆಸ್ಸಿಗ ಎಂದು ತಿಳಿಸಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ವರ್ಷ ಮಾಡದ ನವ ಕರ್ನಾಟಕವನ್ನು ಈಗೇನು ಮಾಡುತ್ತಾರೆ ಎಂದು ಪ್ರಶ್ನಿಸಿರುವ ಅವರು ಐದು ವರ್ಷಗಳಲ್ಲಿ ಬರೀ ಲೂಟಿ ಮಾಡಿ, ಲಿಂಗಾಯತ ಧರ್ಮವನ್ನು ಒಡೆದು ಈಗ ಬಸವ ಕಲ್ಯಾಣದಿಂದ ಯಾತ್ರೆ ಮಾಡಲು ಸಿದ್ದರಾಮಯ್ಯಗೆ ನಾಚಿಕೆ ಆಗಬೇಕು ಎಂದಿದ್ದಾರೆ.
Comments