ಅಭ್ಯರ್ಥಿಗಳ ಪಟ್ಟಿಯನ್ನು ಆತುರದಿಂದ ಘೋಷಿಸುವುದಿಲ್ಲ, ಸಿಎಂ
ಬಸವಕಲ್ಯಾಣ : ಮುಂದಿನ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ಕಾರ್ಯತಂತ್ರ ರೂಪಿಸಿ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತದೆ.
ಈ ವರ್ಷದ ಆರಂಭದಲ್ಲಿ 171 ಮಂದಿಯನ್ನು ಪಕ್ಷದ ಪದಾಧಿಕಾರಿಗಳನ್ನಾಗಿ ನೇಮಿಸಿ ರಾಜ್ಯ ಕಾಂಗ್ರೆಸ್ ಸಮಿತಿಯನ್ನು ಪುನರ್ ಸಂಘಟನೆಗೊಳಿಸಲಾಗಿತ್ತು . ಅವರಲ್ಲಿ 33 ಮಂದಿ ಮಹಿಳೆಯರಾಗಿದ್ದಾರೆ ಎಂದರು.
ವಿಧಾನಸಭಾ ಚುನಾವಣೆಯಲ್ಲಿ ಮಾರ್ಚ್ ಹೊತ್ತಿಗಷ್ಟೆ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಘೋಷಣೆ ಮಾಡಲಿದೆ ಎಂದು ಸಿಎಂ ಹೇಳಿದರು. ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಪಕ್ಷದೊಳಗಿನ ಸಮೀಕ್ಷೆ ಮತ್ತು ಬೇರೆ ವರದಿಗಳು ಬಂದ ನಂತರ ಪ್ರತಿ ಕ್ಷೇತ್ರಗಳ ಈಗಿರುವ ಶಾಸಕರ ಸಾಮರ್ಥ್ಯ ಮತ್ತು ದೌರ್ಬಲ್ಯವನ್ನು ಅರಿತುಕೊಂಡು ಬಳಿಕ ಅಭ್ಯರ್ಥಿಗಳನ್ನು ಮುಂದಿನ ಚುನಾವಣೆಗೆ ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.
Comments