ರಾಜಕೀಯಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ವಿದಾಯ?
ನನ್ನ ರಾಜಕೀಯ ಜೀವನದಲ್ಲಿ ಎಂದಿಗೂ ಅಧಿಕಾರಕ್ಕಾಗಿ ಹಾತೊರೆದಿಲ್ಲ. 2018 ರ ಚುನಾವಣೆ ನನ್ನ ರಾಜಕೀಯ ಜೀವನದ ಕೊನೆ ಹೋರಾಟ. ಪಕ್ಷ ಹಾಗೂ ಕಾರ್ಯಕರ್ತರಿಗೆ ಬಲ ತುಂಬುವ ಸಲುವಾಗಿ ಜನರನ್ನು ನಿರಂತರವಾಗಿ ಭೇಟಿ ಮಾಡಲಿದ್ದೇನೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದಾರೆ.
'ಕುಮಾರ ಪರ್ವ' ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಾತ್ಯಾತೀತ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲದ ಕೋಮುವಾದಿ ಶಕ್ತಿಗಳ ಚುನಾವಣೆಯಲ್ಲಿ ಗೆಲ್ಲಬಾರದು ಎಂಬ ಉದ್ದೇಶಕ್ಕಾಗಿ ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರಲಿಲ್ಲ. ಆದರೆ ಮುಂದಿನ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಎರಡೂ ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದ್ದಾರೆ ಎಂದರು. ಈ ಬಾರಿ ನಂಜನಗೂಡು ಮತ್ತು ಗುಂಡ್ಲುಪೇಟೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲುವಿಗಾಗಿ ಹೋರಾಟ ನಡೆಸಲಿದ್ದಾರೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದಾರೆ.
Comments