20 ವರ್ಷಗಳ ಸುದೀರ್ಘ ರಾಜಕೀಯಕ್ಕೆ ಗುಡ್ ಬೈ ಹೇಳಲಿದ್ದಾರಾ ಸೋನಿಯಾ?

ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಹೆಸರನ್ನು ಕಾಂಗ್ರೆಸ್ ಪ್ರಕಟಿಸಿದ್ದು, ರಾಹುಲ್ ಗಾಂಧಿ ಡಿ. 16 ರಂದು ತಮ್ಮ ತಾಯಿ ಸೋನಿಯಾ ಗಾಂಧಿ ಅವರಿಂದ ಅಧಿಕಾರವನ್ನು ಪಡೆದುಕೊಳ್ಳಲಿದ್ದಾರೆ. ಸೋನಿಯಾ ಗಾಂಧಿ ಅವರು ಸುಮಾರು 19 ವರ್ಷಗಳ ಕಾಲ ಪಕ್ಷದ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದರು.
ಕಾಂಗ್ರೆಸ್ ರಾಹುಲ್ ಗಾಂಧಿಯವರನ್ನು ತನ್ನ ಅಧ್ಯಕ್ಷರನ್ನಾಗಿ ಘೋಷಿಸಿದ್ದು, 47ರ ಹರೆಯದ ರಾಹುಲ್ ಡಿ.16 ರಂದು ತನ್ನ ತಾಯಿ ಹಾಗೂ ಹಾಲಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಂದ ಅಧಿಕಾರ ಸ್ವೀಕರಿಸಲಿದ್ದಾರೆ. ಸೋನಿಯಾ ಕಳೆದ 19 ವರ್ಷಗಳಿಂದ ಎಐಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಿದ್ದಾರೆ. ರಾಹುಲ್ 2013ರ ಜನವರಿಯಲ್ಲಿ ಪಕ್ಷದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ''ಇಡೀ ದೇಶ ರಾಹುಲ್ ಗಾಂಧಿ ಅವರಿಂದ ಭಾರೀ ನಿರೀಕ್ಷೆ ಇಟ್ಟುಕೊಂಡಿದೆ. ಅವರು ಅಧ್ಯಕ್ಷರಾಗಿ ಆಯ್ಕೆಯಾಗುವ ಮೊದಲು ತನ್ನ ಶಕ್ತಿ ತೋರಿಸಬೇಕಾಗಿದೆ. ಅವರಿಗೆ ತನ್ನ ಜವಾಬ್ದಾರಿಯ ಅರಿವಿದೆ'' ಎಂದು ಕಾಂಗ್ರೆಸ್ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಹೇಳಿದ್ದಾರೆ.
Comments