ಪ್ರಾಣ ಭೀತಿ ಹಿನ್ನೆಲೆ ಪಿಸ್ತೂಲ್‌ಗಾಗಿ ಅರ್ಜಿ ಸಲ್ಲಿಸಿರುವ ಶೋಭಾ ಕರಂದ್ಲಾಜೆ

ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಆತ್ಮರಕ್ಷಣೆಗಾಗಿ ಪಿಸ್ತೂಲ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ದ.ಕ. ಸೇರಿ ರಾಜ್ಯದ ವಿವಿಧೆಡೆ ಹಿಂದೂ ಕಾರ್ಯಕರ್ತರ ಹತ್ಯೆ ಹಿಂದೆ ಭಯೋತ್ಪಾದಕ ಸಂಘಟನೆಗಳ ಕೈವಾಡವಿದೆ ಎಂದು ಶೋಭಾ ಅವರು ಪ್ರತಿಪಾದಿಸುತ್ತಿದ್ದು, ಪಿಎಫ್ಐ ಹಾಗೂ ಕೆಎಫ್‌ಡಿ ಸಂಘಟನೆಗಳನ್ನು ನಿಷೇಧಿಸಬೇಕು ಹಾಗೂ ಎಲ್ಲ ಪ್ರಕರಣಗಳನ್ನೂ ಭಯೋತ್ಪಾದಕರ ಕೃತ್ಯ ಎಂದು ಪರಿಗಣಿಸಬೇಕು ಎಂದು ಒತ್ತಾಯಿಸುತ್ತಾ ಬಂದಿದ್ದಾರೆ.
ಈ ಹಿನ್ನೆಲೆಯಲ್ಲಿ ಕೆಲವರಿಂದ ಬೆದರಿಕೆ ಇರುವುದಾಗಿ ಗುಪ್ತಚರ ಇಲಾಖೆ ವರದಿ ನೀಡಿತ್ತು ಎನ್ನಲಾಗಿದೆ. ಹೀಗಾಗಿ, ಪಿಸ್ತೂಲ್‌ಗೆ ಲೈಸೆನ್ಸ್ ನೀಡಲು ಪೊಲೀಸ್ ಕಮಿಷನರ್ ಕಚೇರಿಗೆ ದಾಖಲೆ ಸಲ್ಲಿಸಿದ್ದಾರೆ. ದಾಖಲೆಗಳ ಪರಿಶೀಲನೆ ನಡೆಯುತ್ತಿದ್ದು, ಇನ್ನೆರಡು ವಾರದಲ್ಲಿ ಅನುಮತಿ ನೀಡುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Comments