ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ಬಗ್ಗೆ ಸಚಿವ ರಾಜನಾಥ ಸಿಂಗ್ ಕಿಡಿ

ಸಾಮಾಜಿಕ ಕಾರ್ಯಕರ್ತೆ ಗೌರಿ ಲಂಕೇಶ್ ಹಾಗೂ ಹಿಂದೂ ಕಾರ್ಯಕರ್ತರ ಹಂತಕರ ವಿರುದ್ಧ ಕ್ರಮ ಕೈಗೊಳ್ಳದಿರುವುದು ಹಾಗೂ ರಾಜ್ಯದಲ್ಲಿ ಅಪರಾಧ ಕೃತ್ಯಗಳು ಹೆಚ್ಚುತ್ತಿರುವುದರ ಕುರಿತಂತೆ ರಾಜ್ಯ ಸರ್ಕಾರದ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಆದರೆ, ಹಂತಕರನ್ನು ಬಂಧಿಸಿ ಕ್ರಮ ಕೈಗೊಳ್ಳುತ್ತೇವೆ. ಹಿಂದೂ ಕಾರ್ಯಕರ್ತರಾದ ರುದ್ರೇಶ್, ಕಟ್ಟಪ್ಪ ಮತ್ತು ಪರೇಶ್ ಮೆಸ್ತಾರನ್ನು ಹತ್ಯೆ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳುತ್ತೇವೆ. ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಲಾಗಿದೆ. ರಾಜ್ಯ ಸರ್ಕಾರ ಏನು ಮಾಡುತ್ತಿದೆ? ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಆದರೆ, ಸೂಕ್ತ ರೀತಿಯ ತನಿಖೆ ನಡೆಸುತ್ತೇವೆ. ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ವಿಭಜಿತ ಆಡಳಿತವನ್ನು ನಡೆಸುತ್ತಿದ್ದು, ರಾಜ್ಯದಲ್ಲಿ ಬೆಂಕಿ ಹೊತ್ತುಕೊಂಡರೆ ಅದರಿಂದ ಲಾಭ ಪಡೆದುಕೊಳ್ಳಲು ಯತ್ನಿಸುತ್ತಿದೆ. ಆದರೆ, ಬಿಜೆಪಿ ಆ ಬೆಂಕಿಯನ್ನು ಆರಿಸಲು ಯತ್ನಿಸುತ್ತದೆ. ಬಿಜೆಪಿ ಜಾತಿಗಳನ್ನು ಒಂದುಗೂಡಿಸುವ ಕೆಲಸ ಮಾಡುತ್ತಿದೆ. ಮತ ಬ್ಯಾಂಕ್'ಗಾಗಿ ಮುಸ್ಲಿಂ ಸಮುದಾಯದ ಓಲೈಕೆಯಲ್ಲಿ ತೊಡಗಿರುವ ಕಾಂಗ್ರೆಸ್, ಸಂವಿಧಾನದಲ್ಲಿ ಅವಕಾಶ ಇಲ್ಲದಿದ್ದರೂ ಮೀಸಲಾತಿ ಕಲ್ಪಿಸುವ ಸುಳ್ಳು ಭರವಸೆ ನೀಡುತ್ತಿದೆ. ಈ ಮೂಲಕ ಜನರ ಕಣ್ಣಿಗೆ ಮಣ್ಣೆರಚುತ್ತಿದೆ. ಇದು ಅಕ್ಷಮ್ಯ ಅಪರಾಧ ಎಂದು ಕಿಡಿಕಾರಿದ್ದಾರೆ.
Comments