ಗುಜರಾತ್ : ಬಿಜೆಪಿಗೆ ಮೊದಲ ಗೆಲುವು
ಗುಜರಾತ್‌ನಲ್ಲಿ ಆಡಳಿತಾರೂಢ ಬಿಜೆಪಿ ಸತತ 6ನೇ ಗೆಲುವಿನತ್ತ ಮುನ್ನಡೆಯುತ್ತಿದ್ದು, 105 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ರಾಕೇಶ್ ಶಾ 46,149 ಮತಗಳನ್ನು ಪಡೆದರೆ ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ನ ವಿಜಯ್ ಕುಮಾರ್ ದವೆ ಕೇವಲ 14,134 ಮತಗಳನ್ನು ಪಡೆದಿದ್ದಾರೆ.
ಚುನಾವಣಾ ಆಯೋಗದ ಮಾಹಿತಿಗಳ ಪ್ರಕಾರ ಸದ್ಯ ಗುಜರಾತ್ ನಲ್ಲಿ ಬಿಜೆಪಿ 100 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಕಾಂಗ್ರೆಸ್ 69 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದೆ. ಇತರರು ಐದು ಕ್ಷೇತ್ರಗಳಲ್ಲಿ ಮುಂದಿದ್ದಾರೆ. ಕಾಂಗ್ರೆಸ್ ಪ್ರಬಲ ಪೈಪೋಟಿ ನೀಡಿದರೂ ಮ್ಯಾಜಿಕ್ ಸಂಖ್ಯೆ (92)ಯ ಸನಿಹಕ್ಕೆ ಬರಲಾಗಲಿಲ್ಲ. ಗುಜರಾತ್‌ನಲ್ಲಿ ಮೋದಿ ಆಲೆಯ ಮುಂದೆ ರಾಹುಲ್ ಗಾಂಧಿಯ ಮ್ಯಾಜಿಕ್ ವೈಫಲ್ಯವಾಗಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಗುಜರಾತ್ ಮತದಾರರು ಮತ್ತೆ ಬಿಜೆಪಿ ಕೈಹಿಡಿಯುವ ಮೂಲಕ ಪ್ರಧಾನಿ ಮೋದಿಗೆ ಬಲ ತುಂಬಿದ್ದಾರೆ ಎಂದು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ತಿಳಿಸಿದ್ದಾರೆ. ಸದ್ಯದ ಟ್ರೆಂಡ್ ಪ್ರಕಾರ ಬಿಜೆಪಿ 105 ಸ್ಥಾನಗಳಲ್ಲಿ, ಕಾಂಗ್ರೆಸ್ 77 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.
Comments