ಗುಜರಾತ್ ಚುನಾವಣಾ ಫಲಿತಾಂಶದಿಂದ ಸಂತುಷ್ಟರಾದ ರಾಹುಲ್

ಗುಜರಾತ್ ಚುನಾವಣೆಯಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದ ರಾಹುಲ್ ಗಾಂಧಿ ಅವರು ಅಧ್ಯಕ್ಷರಾಗಿ ಆಯ್ಕೆಗೊಂಡ ಬಳಿಕ ಮೊದಲ ಚುನಾವಣಾ ಫಲಿತಾಂಶ ಹೊರಬಂದಿದೆ. ಚುನಾವಣೆ ನಡೆಯುವ ಹೊತ್ತಿಗೆ ಅವರು ಎಐಸಿಸಿ ಉಪಾಧ್ಯಕ್ಷರಾಗಿದ್ದರು. ಅವರ ನೇತೃತ್ವದಲ್ಲಿ ಕಾಂಗ್ರೆಸ್ ಗುಜರಾತ್ ನಲ್ಲಿ ಬಹುಮತ ಗಳಿಸದಿದ್ದರೂ, ಹಿಂದಿನ ಚುನಾವಣೆಗಿಂತ ಈ ಬಾರಿ ಹೆಚ್ಚು ಸ್ಥಾನಗಳನ್ನು ಗೆದ್ದುಕೊಂಡಿದೆ.ರಾಹುಲ್ ಗಾಂಧಿ ಚುನಾವಣಾ ಫಲಿತಾಂಶದಿಂದ ಸಂತುಷ್ಟರಾಗಿದ್ದಾರೆ.
ಗುಜರಾತ್ ಚುನಾವಣಾ ಫಲಿತಾಂಶ ನನಗೆ ನಿರಾಸೆ ತಂದಿಲ್ಲ. ಫಲಿತಾಂಶ ತೃಪ್ತಿ ತಂದಿದೆ" ಎಂದು ಅಖಿಲ ಭಾರತೀಯ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷ ರಾಹುಲ್ ಗಾಂಧಿ ಅಭಿಪ್ರಾಯಪಟ್ಟರು. ಎಐಸಿಸಿ ಕಚೇರಿಯಲ್ಲಿ ಗುಜರಾತ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಗುಜರಾತ್ ನಲ್ಲಿ ಬಿಜೆಪಿ 105, ಕಾಂಗ್ರೆಸ್ 74 ಮತ್ತು 2 ಕ್ಷೇತ್ರಗಳಲ್ಲಿ ಇತರ ಪಕ್ಷಗಳು ,ಹಿಮಾಚಲ ಪ್ರದೇಶದಲ್ಲಿ ಬಿಜೆಪಿ 42 , ಕಾಂಗ್ರೆಸ್ 23 ಮತ್ತು 3 ಕ್ಷೇತ್ರಗಳಲ್ಲಿ ಇತರ ಪಕ್ಷಗಳು ಮುನ್ನಡೆ ಸಾಧಿಸಿವೆ.
Comments