ಗುಜರಾತ್ ಚುನಾವಣೆಯ ಬಗ್ಗೆ ರಮ್ಯಾ ಹೇಳಿದ್ದೇನು?

18 Dec 2017 3:33 PM | Politics
391 Report

ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳ ವಿಧಾನಸಭಾ ಚುನಾವಣೆಯ ಎಣಿಕೆ ಕಾರ್ಯ ಮುಂದುವರೆದಿದ್ದು, ಎರಡೂ ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತದತ್ತ ಸಾಗುತ್ತಿದ್ದು, ಈ ಹಿನ್ನಲೆಯಲ್ಲಿ ನಟಿ ಹಾಗೂ ಕಾಂಗ್ರೆಸ್ ಮಾಜಿ ಸಂಸದೆ ರಮ್ಯಾ ಅವರು ಬಿಜೆಪಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಎರಡು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಮ್ಯಾ ಅವರು, ಬಿಜೆಪಿಗೆ ಅಭಿನಂದನೆಗಳು. ನಾವು ಇಲ್ಲಿಗೆ ಸುಲಭವಾಗಿ ಬಿಟ್ಟು ಕೊಡುವುದಿಲ್ಲ ಎಂದು ಬಿಜೆಪಿಯ ಕಾಲೆಳೆದಿದ್ದಾರೆ. ಕಾಂಗ್ರೆಸ್ ಪೈಪೋಟಿ ನಡುವೆಯೂ ಗುಜರಾತ್ ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೇರಲು ಸಕಲ ಸಿದ್ಧತೆಗಳನ್ನು ನಡೆಸಿದೆ. ಇನ್ನು ಕಾಂಗ್ರೆಸ್ ಅಧಿಕಾರದಲ್ಲಿದ್ದ ಹಿಮಾಚಲ ಪ್ರದೇಶವನ್ನು ಬಿಜೆಪಿ ತನ್ನ ತೆಕ್ಕೆಗೆ ಹಾಕಿಕೊಳ್ಳುವತ್ತ ಮುನ್ನುಗ್ಗುತ್ತಿದೆ.

Edited By

Hema Latha

Reported By

Madhu shree

Comments