ಹಾಸನ, ಚಾಮರಾಜನಗರ ಜಿಲ್ಲಾ ಬಿಜೆಪಿ ಉಸ್ತುವಾರಿಯಾಗಿ ವಿ.ಸೋಮಣ್ಣ ನೇಮಕ

ಗುಜರಾತ್ ಹಾಗೂ ಹಿಮಾಚಲ ಪ್ರದೇಶ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಕಾರ್ಯತಂತ್ರ ರೂಪಿಸುತ್ತಿದೆ.
ಇದರ ಮೊದಲ ಭಾಗವಾಗಿ, ಹಾಸನ ಮತ್ತು ಚಾಮರಾಜನಗರಕ್ಕೆ ಜಿಲ್ಲಾ ಉಸ್ತುವಾರಿಯಾಗಿ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ವಿ.ಸೋಮಣ್ಣ ಅವರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.ತಮ್ಮನ್ನು ಹಾಸನ ಮತ್ತು ಚಾಮರಾಜನಗರಕ್ಕೆ ಜಿಲ್ಲಾ ಉಸ್ತುವಾರಿಯಾಗಿ ನಿಯುಕ್ತಿ ಮಾಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿರುವ ಸೋಮಣ್ಣ, ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯಾಗಿ ನಿರ್ವಹಿಸುತ್ತೇನೆ. ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸದೃಢಗೊಳಿಸಿ, ಮುಂಬರುವ ಎಲ್ಲ ರೀತಿಯ ಸವಾಲುಗಳನ್ನು ಎದುರಿಸಿ ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಶ್ರಮಿಸುವುದಾಗಿ ಭರವಸೆ ನೀಡಿದ್ದಾರೆ.
Comments