ಮೋದಿ ವರ್ಚಸ್ಸಿನಿಂದ ಬಿಜೆಪಿ ಮತ್ತೆ ಗೆಲ್ಲಲು ಸಾಧ್ಯವಾಗಿದೆ : ಎಚ್ ಡಿಡಿ

ಗುಜರಾತ್‌ನಲ್ಲಿ ಮೋದಿ ವರ್ಚಸ್ಸಿನಿಂದ ಬಿಜೆಪಿ ಮತ್ತೆ ಗೆಲ್ಲಲು ಸಾಧ್ಯವಾಗಿದೆ. ಹಿಮಾಚಲ ಪ್ರದೇಶದಲ್ಲಿ ಯಾವಾಗಲೂ ಪ್ರತ್ಯೇಕ ಸರ್ಕಾರಗಳೇ ಬರುತ್ತವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಎರಡೂ ರಾಜ್ಯಗಳ ಫಲಿತಾಂಶ ಕುರಿತು ದೆಹಲಿಯಲ್ಲಿ ಪ್ರತಿಕ್ರಿಯಿಸಿರುವ ಅವರು, ಗುಜರಾತ್‌ನಲ್ಲಿ ಆಡಳಿತ ವಿರೋಧಿ ಅಲೆಯನ್ನು ಕಾಂಗ್ರೆಸ್ ಸದುಪಯೋಗಪಡಿಸಿಕೊಂಡಿಲ್ಲ. ರಾಹುಲ್‌ಗಾಂಧಿ ಸ್ವಲ್ಪ ಮಾತ್ರ ಗಳಿಸಿಕೊಂಡಿದ್ದಾರೆ ಎಂದು ಹೇಳಿದರು. ಗುಜರಾತ್ ಚುನಾವಣೆ ಫಲಿತಾಂಶ ರಾಜ್ಯದ ಮೇಲೆ ಪರಿಣಾಮ ಬೀರುವುದಿಲ್ಲ. ಗುಜರಾತ್‌ನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಾತ್ರ ಇದೆ. ಆದರೆ, ಕರ್ನಾಟಕದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿವೆ. ಇಲ್ಲಿನ ಚುನಾವಣೆ ಸಿದ್ದರಾಮಯ್ಯ, ಯಡಿಯೂರಪ್ಪ, ಕುಮಾರಸ್ವಾಮಿಯ ಕ್ರೆಡಿಬಿಲಿಟಿ ಪ್ರಶ್ನೆಯಾಗಿದೆ ಎಂದು ಹೇಳಿದರು.
Comments