ಗಾಂಧಿ ನಾಡಿನಲ್ಲಿ ಗದ್ದುಗೆ ಏರಲು ಪೈಪೋಟಿ ಶುರು

ಗಾಂಧಿ ನಾಡಿನಲ್ಲಿ ಗದ್ದುಗೆ ಏರಲು ಪೈಪೋಟಿ ಶುರುವಾಗಿದೆ. ಗುಜರಾತ್ ನಲ್ಲಿ ರೂಪಾನಿ ಅವರನ್ನೇ ಮುಂದುವರೆಸಬೇಕೆ ಅಥವಾ ಹೊಸಬರನ್ನು ಆಯ್ಕೆ ಮಾಡಬೇಕೆ ಎಂಬುದರ ಕುರಿತು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರು ರಾತ್ರಿಯೇ ಚರ್ಚೆ ನಡೆಸಿದ್ದಾರೆ. ಎರಡೂ ರಾಜ್ಯಗಳಲ್ಲಿ ಅಧಿಕಾರ ಗದ್ದುಗೆ ಹಿಡಿದಿರುವ ಬಿ.ಜೆ.ಪಿ., ಮುಖ್ಯಮಂತ್ರಿಯಾಗಿ ಯಾರನ್ನು ಆಯ್ಕೆ ಮಾಡಲಿದೆ ಎಂಬುದು ಕುತೂಹಲ ಮೂಡಿಸಿದೆ.
ಗುಜರಾತ್ ಮತ್ತು ಹಿಮಾಚಲ ಪ್ರದೇಶ ಭರ್ಜರಿ ಗೆಲುವು ಕಂಡಿರುವ ಬಿ.ಜೆ.ಪಿ.ಗೆ ಮತ್ತೊಂದು ಟೆನ್ಷನ್ ಶುರುವಾಗಿದೆ. ಎರಡೂ ರಾಜ್ಯಗಳಲ್ಲಿ ಮುಖ್ಯಮಂತ್ರಿಯಾಗಿ ಯಾರನ್ನು ಆಯ್ಕೆ ಮಾಡಬೇಕೆಂಬ ಚರ್ಚೆ ನಡೆದಿದೆ. ಹಿಮಾಚಲ ಪ್ರದೇಶದಲ್ಲಿ ಬಿ.ಜೆ.ಪಿ. ಮುಖ್ಯಮಂತ್ರಿ ಅಭ್ಯರ್ಥಿ ಪ್ರೇಮ್ ಕುಮಾರ್ ಧುಮಾಲ್ ಸೋಲು ಕಂಡಿದ್ದಾರೆ. ಅವರ ಬದಲಿಗೆ ಕೇಂದ್ರ ಸಚಿವ ಜೆ.ಪಿ. ನಡ್ಡಾ ಸೇರಿ ಹಲವರ ಹೆಸರು ಕೇಳಿ ಬಂದಿವೆ. ಆದರೆ, ದೆಹಲಿಗೆ ಹಿರಿಯ ಶಾಸಕರನ್ನು ಕರೆಸಿಕೊಂಡಿರುವ ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಇನ್ನು ಗುಜರಾತ್ ನಲ್ಲಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರನ್ನು ಮತ್ತೊಂದು ಅವಧಿಗೆ ಮುಂದುವರೆಸಲು ಯೋಜಿಸಲಾಗಿದೆ. ಆದರೆ, ಕರ್ನಾಟಕದ ರಾಜ್ಯಪಾಲ ವಜೂಭಾಯ್ ವಾಲಾ ಅವರ ಹೆಸರೂ ಮುಖ್ಯಮಂತ್ರಿ ಹುದ್ದೆಗೆ ಕೇಳಿ ಬಂದಿದೆ ಎನ್ನಲಾಗಿದೆ.
Comments