ಗೆಲುವಿನ ಸಂತಸದಲ್ಲಿ ಮಂಗಳೂರಿಗೆ ಭೇಟಿ ನೀಡಿದ ಪ್ರಧಾನಿ
ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಬಿ.ಜೆ.ಪಿ. ಭರ್ಜರಿ ಜಯಗಳಿಸಿರುವ ಸಂತಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ರಾತ್ರಿ ಮಂಗಳೂರಿಗೆ ಭೇಟಿ ನೀಡಿದ್ದಾರೆ. ವಿಶೇಷ ವಿಮಾನದಲ್ಲಿ ರಾತ್ರಿ 11.45 ಕ್ಕೆ ಮಂಗಳೂರಿಗೆ ಆಗಮಿಸಿದ ಮೋದಿ ಅವರಿಗೆ ಅದ್ಧೂರಿ ಸ್ವಾಗತ ನೀಡಲಾಗಿದೆ.
ಕೇಂದ್ರ ಸಚಿವ ರಾಧಾಕೃಷ್ಣನ್, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಮೊದಲಾದವರು ಇದ್ದರು. ವಿಮಾನ ನಿಲ್ದಾಣದ ಬಳಿ ನೆರೆದಿದ್ದ ಪಕ್ಷದ ಕಾರ್ಯಕರ್ತರು ಹಾಗೂ ಜನರತ್ತ ಕೈ ಬೀಸಿದ ಮೋದಿ ಚುನಾವಣೆ ಗೆಲುವಿನ ಖುಷಿ ಹಂಚಿಕೊಂಡಿದ್ದಾರೆ. ಅಲ್ಲಿಂದ ಸರ್ಕಾರಿ ಅತಿಥಿ ಗೃಹಕ್ಕೆ ತೆರಳಿ ವಾಸ್ತವ್ಯ ಹೂಡಿದ್ದಾರೆ. ಪ್ರಧಾನಿ ವಾಸ್ತವ್ಯದ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಇಂದು ವಿಶೇಷ ವಿಮಾನದಲ್ಲಿ ಕೊಚ್ಚಿಗೆ ತೆರಳಲಿದ್ದಾರೆ. ಒಖ್ಹಿ ಚಂಡಮಾರತದಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ನಂತರ ಲಕ್ಷದ್ವೀಪ ಮತ್ತು ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ.
Comments