ಜಿ.ಟಿ.ದೇವೇಗೌಡರ ಮಗನ ಮೇಲೆ ಎಫ್ ಐಆರ್

"ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ವಿರುದ್ಧ ಎಸಿಬಿಯನ್ನು ಬಳಸಿಕೊಳ್ಳುತ್ತಿದ್ದಾರೆ. ಅವರ ವಿರುದ್ಧ ಮುಂಬರುವ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂಬ ಕಾರಣಕ್ಕೆ ಇಂಥ ಷಡ್ಯಂತ್ರ ಹೂಡಿದ್ದಾರೆ" ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಗಂಭೀರ ಆರೋಪ ಮಾಡಿದ್ದಾರೆ.
ಈ ಆರೋಪಕ್ಕೆ ಸಂಬಂಧಿಸಿದಂತೆ 46 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಸರಕಾರ ಲೋಕಾಯುಕ್ತ ತನಿಖೆಗೆ ಆದೇಶಿಸಿತ್ತು. ನಾನಾ ಕಾರಣಕ್ಕೆ ಪ್ರಕರಣ ನೆನೆಗುದಿಗೆ ಬಿದ್ದಿದ್ದರಿಂದ ನ್ಯಾಯಾಲಯವೇ ಮಧ್ಯಪ್ರವೇಶಿಸಿ ಸೂಕ್ತ ಕ್ರಮಕ್ಕೆ ಆದೇಶಿಸಿತ್ತು. ಇದೀಗ ರಾಜ್ಯ ಸರಕಾರ ತನಿಖೆಯನ್ನು ಲೋಕಾಯುಕ್ತದಿಂದ ಎಸಿಬಿಗೆ ವರ್ಗಾಯಿಸಿದೆ. ಶಾಸಕ ಜಿ.ಟಿ.ದೇವೇಗೌಡ ಪ್ರಕರಣದ ಆರೋಪ ಎದುರಿಸುತ್ತಿದ್ದಾರೆ. ಅವರ ಮಗ ಹರೀಶ್ ಗೌಡ ಸೇರಿದಂತೆ 46 ಮಂದಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.
Comments