ಮಹದಾಯಿ ಜಲವಿವಾದಕ್ಕೆ ಬಗ್ಗೆ ಬಿಜೆಪಿ ನಾಯಕರಿಂದ ಸಂಧಾನ ಮಾತುಕತೆ

ರಾಜ್ಯ ಬಿಜೆಪಿ ನಾಯಕರು ಮಹದಾಯಿ ಜಲವಿವಾದಕ್ಕೆ ಸಂಬಂಧಿಸಿ ಸಂಧಾನ ಮಾತುಕತೆ ನಡೆಸಿದ್ದಾರೆ. ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್, ಕೇಂದ್ರ ಸಚಿವ ಅನಂತಕುಮಾರ್, ರಾಜ್ಯ ಉಸ್ತುವಾರಿ ಮುರುಳೀಧರರಾವ್, ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಸವರಾಜ್ ಬೊಮ್ಮಾಯಿ, ಪ್ರಹ್ಲಾದ್ ಜೋಶಿ ಭಾಗವಹಿಸಿದರು.
ಸಭೆ ಬಳಿಕ ಮಾತನಾಡಿದ ಬಿ.ಎಸ್. ಯಡಿಯೂರಪ್ಪ,'ಮಹದಾಯಿ ನೀರು ಹಂಚಿಕೆ ವಿಚಾರವಾಗಿ ಚರ್ಚೆ ನಡೆಸಿದ್ದೇವೆ. ಈ ಕುರಿತು ಗೋವಾ ತನ್ನ ಅಭಿಪ್ರಾಯ ನಾಳೆ ಪ್ರಕಟಿಸುವ ಸಾಧ್ಯತೆಯಿದ್ದು, ಅದನ್ನು ಹುಬ್ಬಳ್ಳಿಯಲ್ಲಿ ಗುರುವಾರ ನಡೆಯಲಿರುವ ಪರಿವರ್ತನಾ ಯಾತ್ರೆ ಸಂದರ್ಭ ಅಧಿಕೃತವಾಗಿ ಘೋಷಿಸಲಾಗುವುದು' ಎಂದು ತಿಳಿಸಿದರು. ಇಂದಿನ ಸಭೆ ನನಗೆ ತೃಪ್ತಿ ನೀಡಿದೆ ಎಂದೂ ಅವರು ಹೇಳಿದರು.
Comments