ಸರ್ಕಾರ ಜೆಡಿಎಸ್ ನಾಯಕರನ್ನು ಟಾರ್ಗೆಟ್ ಮಾಡಲಾಗುತಿದ್ಯಾ?

ಚುನಾವಣೆ ಹತ್ತಿರವಾಗುತ್ತಿದ್ದಂತೆ ಜೆಡಿಎಸ್ ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸಲಾಗುತ್ತಿದೆ. ಅಕ್ರಮ ಕಲ್ಲು ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿ.ಎಸ್.ಪುಟ್ಟರಾಜು ವಿರುದ್ಧ ತನಿಖೆಗೆ ಆದೇಶ ನೀಡಲಾಗಿದೆ. ಅರಣ್ಯ ಇಲಾಖೆಯ ಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎಸ್.ಮೂರ್ತಿ ತನಿಖೆಗೆ ಆದೇಶಿಸಿದ್ದಾರೆ.
ಮಂಡ್ಯ ಜಿಲ್ಲೆಯ ಬೇಬಿ ಬೆಟ್ಟ, ಚಿನಕುರಳಿ ಸೇರಿದಂತೆ ವಿವಿಧ ಅರಣ್ಯ ಪ್ರದೇಶಗಳಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದೆ ಎಂದು ಆರ್‌ಟಿಐ ಕಾರ್ಯಕರ್ತ ರವೀಂದ್ರ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ದೂರು ನೀಡಿದ್ದರು.ಈ ದೂರನ್ನು ಅರಣ್ಯ ಇಲಾಖೆಗೆ ವರ್ಗಾವಣೆ ಮಾಡಲಾಗಿತ್ತು. ಡಾ.ಕೆ.ಎಸ್.ಮೂರ್ತಿ ಅವರು ಈ ಬಗ್ಗೆ ತನಿಖೆ ನಡೆಸಿ, 15 ದಿನಗಳಲ್ಲಿ ವರದಿ ನೀಡುವಂತೆ ಆದೇಶ ಹೊರಡಿಸಿದ್ದಾರೆ.
Comments