ಮೇ ಬಳಿಕ ಕಾಂಗ್ರೆಸ್ ರಾಜ್ಯದಲ್ಲಿ ಸರ್ವ ನಾಶವಾಗಲಿದೆ : ಎಚ್ ಡಿಕೆ ಭವಿಷ್ಯ

ಮೇ ಬಳಿಕ ಕಾಂಗ್ರೆಸ್ ರಾಜ್ಯದಲ್ಲಿ ಸರ್ವ ನಾಶವಾಗಲಿದೆ ಎಂದು ಭವಿಷ್ಯ ನುಡಿದರು. ದ್ವೇಷದ ರಾಜಕಾರಣ ಮಾಡುತ್ತಿರುವ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿದ್ದ ವೇಳೆ ಏನು ಮಾಡಿದ್ದಾರೆ ಎಂಬುದು ಗೊತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.
ಜನರ ಮುಂದೆ ಹೋಗಿ ಎದುರಿಸುವ ಶಕ್ತಿ ಇಲ್ಲದೆ ಸುಳ್ಳು ಪ್ರಕರಣಗಳನ್ನು ದಾಖಲಿಸಿ ಪ್ರತಿಸ್ಪರ್ಧಿಗಳನ್ನು ಹೆದರಿಸುವ ಕೆಲಸ ಮಾಡಲಾಗುತ್ತಿದೆ. ಆದರೆ, ಈ ಗೊಡ್ಡು ಬೆದರಿಕೆಗೆ ನಾವು ಹೆದರುವುದಿಲ್ಲ. ತೊಡೆ ತಟ್ಟಿ ನಿಲ್ಲತ್ತೇವೆ. ಜೈಲಿಗೆ ಕಳುಹಿಸಲಿ ನೋಡೋಣ..!’ ವಿರೋಧಿ ಗಳನ್ನು ಬಗ್ಗು ಬಡಿಯಲು ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಿಂದ ಜಿ.ಟಿ.ದೇವೇಗೌಡ ಮತ್ತು ಮುಖ್ಯಮಂತ್ರಿಗಳು ಕಣಕ್ಕಿಳಿಯುತ್ತಿದ್ದಾರೆ. 44 ಆರೋಪಿಗಳ ಪಟ್ಟಿಯನ್ನು ಮಾಡಿ ಎಫ್ಐಆರ್ ದಾಖಲಿಸಲಾಗಿದೆ. ಲೋಕಾಯುಕ್ತದಲ್ಲಿ ತನಿಖೆ ನಡೆಯಲಿಲ್ಲ ಎಂಬ ಕಾರಣಕ್ಕಾಗಿ ಮೂರು ವರ್ಷಗಳ ನಂತರ ಎಸಿಬಿಗೆ ನೀಡಲಾಗಿದೆ. ದೇವೇಗೌಡ ಅವರ ಮಗನ ಹೆಸರಿನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಈ ಮೂಲಕ ದೇವೇಗೌಡ ಅವರನ್ನು ಹೆದರಿಸುವ ಪ್ರಯತ್ನ ಮಾಡಲಾಗಿದೆ ಎಂದು ಹೇಳಿದ್ದಾರೆ.
Comments