'ಆಮ್ ಆದ್ಮಿ' ಪಕ್ಷದಿಂದ ಅಭ್ಯರ್ಥಿಗಳು ಕಣಕ್ಕೆ
ಬೆಂಗಳೂರು: ಬೆಂಗಳೂರಿನಲ್ಲಿ ಗುರುವಾರ 'ಆಮ್ ಆದ್ಮಿ' ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರು ಹಾಗೂ ರಾಜಕೀಯ ಸಮಿತಿ ಸದಸ್ಯರಾದ ಸಂಜಯ್ ಸಿಂಗ್ ಪತ್ರಿಕಾಗೋಷ್ಠಿ ನಡೆಸಿದರು.
ಬೆಂಗಳೂರು: ಬೆಂಗಳೂರಿನಲ್ಲಿ ಗುರುವಾರ 'ಆಮ್ ಆದ್ಮಿ' ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರು ಹಾಗೂ ರಾಜಕೀಯ ಸಮಿತಿ ಸದಸ್ಯರಾದ ಸಂಜಯ್ ಸಿಂಗ್ ಪತ್ರಿಕಾಗೋಷ್ಠಿ ನಡೆಸಿದರು. ಕರ್ನಾಟಕ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಈ ಬಗ್ಗೆ ಶೀರ್ಘದಲ್ಲಿಯೇ ಅಧಿಕೃತ ಘೋಷಣೆ ಮಾಡಲಾಗುತ್ತದೆ ಎಂದು ಸಂಜಯ್ ಸಿಂಗ್ ಹೇಳಿದರು.
ಕಳೆದ ವರ್ಷಗಳಲ್ಲಿ ದೆಹಲಿಯಲ್ಲಿ ನಾವು ಎರಡು ಬಾರಿ ಸರ್ಕಾರ ಮಾಡಿದ್ದೇವೆ. ವಿಧಾನಸಭೆ ಚುನಾವಣೆಯಲ್ಲಿ ದಾಖಲೆಯ ಸ್ಥಾನಗಳನ್ನು ಪಡೆದು ಜಯಗೊಳಿಸಿದ್ದೇವೆ ಎಂದು ಹೇಳಿದರು. ಗೋವಾದಲ್ಲಿ ಚುನಾವಣೆ ಎದುರಿಸಿದ್ದೇವು. ಪಂಜಾಬ್ ನಲ್ಲಿ ಮೊದಲ ಬಾರಿಗೆ ಚುನಾವಣೆ ಎದುರಿಸಿದ್ದೇವು. ಅಲ್ಲಿ ಈಗ ಪ್ರಮುಖ ಪ್ರತಿಪಕ್ಷವಾಗಿದ್ದೇವೆ ಎಂದು ತಿಳಿಸಿದರು.
Comments