ಕುಮಾರಣ್ಣನ ಆರೋಗ್ಯದಲ್ಲಿ ಏರುಪೇರು

23 Dec 2017 10:07 AM | Politics
3871 Report

ಮಾಜಿ ಮುಖ್ಯಮಂತ್ರಿ, ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಅನಾರೋಗ್ಯ ಉಂಟಾಗಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ. ಹಗಲು, ರಾತ್ರಿ ನಿರಂತರವಾಗಿ ಪಕ್ಷ ಸಂಘಟನೆ ಪ್ರವಾಸದಲ್ಲಿ ತೊಡಗಿದ ಕಾರಣ, ಮೈ ಕೈ ನೋವು, ಜ್ವರ ಕಾಣಿಸಿಕೊಂಡಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಇತ್ತೀಚೆಗೆ ಹೃದಯ ಚಿಕಿತ್ಸೆಗೆ ಒಳಗಾಗಿದ್ದ ಅವರು ಪಕ್ಷ ಸಂಘಟನೆ ಮತ್ತು ಮುಂದಿನ ವಿಧಾನಸಭೆ ಚುನಾವಣೆಯ ದೃಷ್ಟಿಯಿಂದ ನಿರಂತರ ಪ್ರವಾಸ ಕೈಗೊಂಡಿದ್ದರಿಂದ ಬಳಲಿದ್ದಾರೆ. ವೈದ್ಯರ ಸಲಹೆಯಂತೆ ಮನೆಯಲ್ಲೇ 2 ದಿನ ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿದೆ.

Edited By

Shruthi G

Reported By

Madhu shree

Comments