ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಭವಿಷ್ಯ ಇಂದು ನಿರ್ಧಾರ ?

900 ಕೋಟಿ ರೂ.ಗಳ ಮೇವು ಹಗರಣದ ತೀರ್ಪನ್ನು ರಾಂಚಿಯ ವಿಶೇಷ ನ್ಯಾಯಾಲಯವೊಂದು ಇಂದು ಹೊರಹಾಕಲಿದೆ. ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್ ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಅವರು ಮುಖ್ಯ ಆರೋಪಿಯಾಗಿದ್ದಾರೆ, ಲಾಲೂ ಭವಿಷ್ಯ ಇಂದು ಕೋರ್ಟ್ ನಲ್ಲಿ ತೀರ್ಮಾನವಾಗಲಿದೆ.
994-1996 ರಲ್ಲಿ ಬಿಹಾರದಲ್ಲಿ ನಡೆದ ಈ ಹಗರಣದಲ್ಲಿ ಪಶುಗಳಿಗೆ ಮೇವು ಹಾಗೂ ಔಷಧಿ ಪೂರೈಸುವ ಉದ್ದೇಶದಿಂದ ಡಿಯೋದರ್(ಈಗ ಜಾರ್ಖಾಂಡ್ ರಾಜ್ಯದಲ್ಲಿದೆ) ಎಂಬ ಜಿಲ್ಲೆಯ ಸರ್ಕಾರಿ ಖಜಾನೆಯಿಂದ ಕೋಟ್ಯಂತರ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿತ್ತು. ಆದರೆ ಈ ಹಣವನ್ನು ಮೂಲ ಉದ್ದೇಶಕ್ಕಾಗಿ ಬಳಸಿಕೊಳ್ಳದೆ ಬಿಹಾರದ ಆಗಿನ ಮುಖ್ಯಮಂತ್ರಿಯಾಗಿದ್ದ ಲಾಲೂ ಯಾದವ್ ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡಿದ್ದಾರೆ ಎಂಬುದು ಆರೋಪವಾಗಿತ್ತು. 1996 ರಲ್ಲಿ ಬೆಳಕಿಗೆ ಬಂದ ಈ ಪ್ರಕರಣದ ವಿಚಾರಣೆ ಡಿ.13, 2017 ಕ್ಕೆ ಅಂತ್ಯವಾಗಿದ್ದು, ಇಂದು ತೀರ್ಪು ಹೊರಬೀಳಲಿದೆ.
Comments