ಇಂದು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಏನು ನಡೆಯಲಿದೆ ಗೊತ್ತಾ.?

26 Dec 2017 10:13 AM | Politics
409 Report

ಮಹದಾಯಿ ವಿವಾದ ಬಗೆಹರಿಸಲು ರೈತರ ಪ್ರತಿಭಟನೆ ಮುಂದುವರಿದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 11 ಕ್ಕೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಕರೆಯಲಾಗಿದೆ. ಮಹದಾಯಿ ಹೋರಾಟಗಾರರು ಮಹದಾಯಿ ನದಿ ಹಂಚಿಕೆಗೆ ಸಂಬಂಧಿಸಿದಂತೆ ಪ್ರತಿಭಟನೆ ಮುಂದುವರಿಸಿದ್ದು ಇದರ ಕುರಿತಾಗಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಪಕ್ಷದ ಕಚೇರಿಯಲ್ಲಿ ಸಭೆಯೊಂದನ್ನು ಕರೆಯಲಾಗಿದೆ.

ಬಿಜೆಪಿ ರಾಜ್ಯ ಉಸ್ತುವಾರಿಗಳಾದ ಪ್ರಕಾಶ್ ಜಾವಡೇಕರ್, ಪಿಯುಶ್ ಗೋಯಲ್, ಸಂಘಟನಾ ಉಸ್ತುವಾರಿ ಮುರಳೀಧರ್ ರಾವ್, ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವರು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ. 

Edited By

Shruthi G

Reported By

Madhu shree

Comments